ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ

July 26, 2024
3:33 PM

ಅರಣ್ಯದಂಚಿನಲ್ಲಿ(Forest) ಬದುಕುವ ನಾಗರೀಕರು(publics) ಅನೇಕ ಸಮಸ್ಯೆಗಳನ್ನು(problems) ಅನುಭವಿಸುತ್ತಿದ್ದಾರೆ. ಇದಕ್ಕೆ ಸರ್ಕಾರವೇ(govt) ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೆಕಾಗುತ್ತದೆ. ಇದೀಗ ಅನುಸೂಚಿತ ಬುಡಕಟ್ಟು(tribal) ಜನರಿಗೆ ಸಿಗುವ ಸವಲತ್ತುಗಳು(facility) ಇತರೆ ಅರಣ್ಯವಾಸಿಗಳಿಗೂ(Forest dweller) ಸಿಗುವಂತೆ ಮಾಡಲು ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ(Amendment to Forest Rights Act)  ತರಬೇಕು ಎಂದು ಕೇಂದ್ರ ಸರ್ಕಾರವನ್ನು(central govt) ಕೋರುವ ನಿರ್ಣಯವನ್ನು ರಾಜ್ಯ ಸರ್ಕಾರ(state govt) ಅಂಗೀಕರಿಸಿದೆ. ಅರಣ್ಯ ಸಚಿವ(forest minister) ಈಶ್ವರ್ ಖಂಡ್ರೆ(Eshwar khandre) ಮಂಡಿಸಿದ ನಿರ್ಣಯ ವಿಧಾನಮಂಡಲದ ಉಭಯ ಸದನಗಳಲ್ಲೂ  ಅಂಗೀಕಾರ ಪಡೆಯಿತು.

Advertisement

ಅನುಸೂಚಿತ ಬುಡಕಟ್ಟುಗಳು ಮತ್ತು ಪಾರಂಪರಿಕ ಅರಣ್ಯವಾಸಿಗಳ (ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ 2006ಕ್ಕೆ ತಿದ್ದುಪಡಿ ತರುವ ಮೂಲಕ ಸವಲತ್ತುಗಳನ್ನು ಇತರೆ ಅರಣ್ಯವಾಸಿಗಳಿಗೂ ದೊರಕಿಸಲು ಸಹಕರಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲು ನಿರ್ಣಯ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

2006ರಲ್ಲಿ ಜಾರಿಗೆ ತಂದು, 2008ರಲ್ಲಿ ನಿಯಮಗಳನ್ನು ರೂಪಿಸಿದ ಫಲವಾಗಿ 2005ರ ಡಿಸೆಂಬರ್ 13ಕ್ಕೂ ಮೊದಲು ಜೀವನೋಪಾಯಕ್ಕಾಗಿ ಅರಣ್ಯದಲ್ಲಿ ವಾಸಿಸುತ್ತಿದ್ದ ಅನುಸೂಚಿತ ಬುಡಕಟ್ಟು ಜನರಿಗೆ ಅರಣ್ಯ ಹಕ್ಕು ಲಭಿಸುತ್ತಿದೆ. ಆದರೆ, ಅರಣ್ಯ ಉತ್ಪನ್ನಗಳನ್ನೇ ನಂಬಿಕೊಂಡು ಹಲವು ತಲೆಮಾರುಗಳಿಂದ ಅರಣ್ಯದಲ್ಲಿ ಬದುಕು ಕಟ್ಟಿಕೊಂಡಿರುವ ಇತರ ಸಮುದಾಯದ ಜನರಿಗೆ ಅರಣ್ಯ ಕಾಯ್ದೆಯ ಫಲ ದೊರೆತಿಲ್ಲ. ಅದಕ್ಕೆ ಕಾಯ್ದೆಯಲ್ಲಿನ ಕೆಲ ನಿಯಮಗಳು ಅಡ್ಡಿಯಾಗಿವೆ. ಅರಣ್ಯವಾಸಿಗಳೆಂದು ಸಾಬೀತು ಮಾಡಲು 75 ವರ್ಷಗಳ ಕಾಲ ಅವರ ಪೂರ್ವಜರು ಅರಣ್ಯದಲ್ಲೇ ಇದ್ದರು ಎಂಬುವುದನ್ನು ಸಾಬೀತುಪಡಿಸುವುದು ಅಸಾಧ್ಯ ಎಂದು ಸಚಿವರು ವಿವರಿಸಿದ್ದಾರೆ.

ಅರಣ್ಯ ಹಕ್ಕು ಕಾಯ್ದೆಯ ಕೆಲ ನಿಯಮಗಳಿಂದಾಗಿ ರಾಜ್ಯದ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಭೂಮಿ ಕಳೆದುಕೊಂಡ ಶರಾವತಿ ಮುಳುಗಡೆ ಪ್ರದೇಶದ ಸಂತ್ರಸ್ತರಿಗೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |
May 13, 2025
7:20 AM
by: ದ ರೂರಲ್ ಮಿರರ್.ಕಾಂ
ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ
May 13, 2025
6:53 AM
by: ದ ರೂರಲ್ ಮಿರರ್.ಕಾಂ
ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group