#CauveryWater | ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಲೇ ಬೇಕು | ತಮಿಳುನಾಡಿಗೆ ನೀರು ಬಿಡದಿದ್ದರೆ ರಾಜ್ಯ ಸರ್ಕಾರವನ್ನೇ ವಜಾ ಮಾಡ್ತಾರೆ: ವೀರಪ್ಪ ಮೊಯ್ಲಿ

October 3, 2023
2:32 PM
ತಮಿಳುನಾಡಿಗೆ ಕಾವೇರು ನೀರು ಬಿಡದಿದ್ದರೆ ರಾಜ್ಯ ಸರ್ಕಾರವನ್ನೆ ವಜಾ ಮಾಡುತ್ತಾರೆ. ಯಾವುದೇ ಸರ್ಕಾರ ಇದ್ದರೂ ಸಹ ನೀರು ಬಿಡುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲೇ ಬೇಕು. ಇದು ಸುಪ್ರೀಂ ಕೋರ್ಟ್‌ ಆದೇಶ. ಈ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ತಮಿಳುನಾಡಿಗೆ ಕಾವೇರು ನೀರು ಬಿಡದಿದ್ದರೆ ರಾಜ್ಯ ಸರ್ಕಾರವನ್ನೆ ವಜಾ ಮಾಡುತ್ತಾರೆ. ಯಾವುದೇ ಸರ್ಕಾರ ಇದ್ದರೂ ಸಹ ನೀರು ಬಿಡುತ್ತಿದ್ದರು ಎಂದು ಹೇಳಿದ್ದಾರೆ. ಈ ಮೂಲಕ ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಬೇಕು. ಮಾಡುತ್ತೇವೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಹಲವು ದಿನಗಳಿಂದ ಬೇಡಿಕೊಂಡರೂ ಮೋದಿ ಸಮಯ ನೀಡುತ್ತಿಲ್ಲ. ಪ್ರಧಾನಮಂತ್ರಿ ಮೋದಿ ಎರಡು ರಾಜ್ಯಗಳನ್ನು ಚರ್ಚೆಗೆ ಕರೆಯಬೇಕಿತ್ತು. ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ದಟತನದಿಂದ ವರ್ತಿಸುತ್ತಿದ್ದಾರೆ. ತಮಿಳುನಾಡು ವಿರುದ್ಧ ಆರೋಪ ಮಾಡಿದರೆ ಯಾವ ಪ್ರಯೋಜನವಿಲ್ಲ. ಅವರ ಹಕ್ಕು ಅವರು ಕೇಳುತ್ತಿದ್ದಾರೆ, ನಮ್ಮ ಹಕ್ಕು ನಾವು ಕೇಳುತ್ತಿದ್ದೇವೆ ಎಂದರು.

ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಯರಿಸಬೇಕು. ಆದರೆ, ಕೇಂದ್ರ ಸರ್ಕಾರ ರಾಜಕೀಯ ಲಾಭಕ್ಕೆ ಕಾವೇರಿ ವಿವಾದದಲ್ಲಿ ಮಧ್ಯಪ್ರವೇಶ ಮಾಡುತ್ತಿಲ್ಲ. ಕಾವೇರಿ ವಿವಾದ ಬಗೆಯರಿಸುವುದು ಅವರಿಗೆ ಬೇಕಿಲ್ಲ. ಬದಲಿಗೆ ರಾಜ್ಯಗಳು ಕಿತ್ತಾಡಬೇಕು ಮೋದಿ ಸರ್ವಾಧಿಕಾರಿಯಾಗಿ ಇರಬೇಕು ಎನ್ನುವ ಭಾವನೆ ಹೊಂದಿದ್ದಾರೆ ಎಂದು ಕಿಡಿಕಾರಿದರು.

ಮೂಲ : ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror