ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲೇ ಬೇಕು. ಇದು ಸುಪ್ರೀಂ ಕೋರ್ಟ್ ಆದೇಶ. ಈ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ತಮಿಳುನಾಡಿಗೆ ಕಾವೇರು ನೀರು ಬಿಡದಿದ್ದರೆ ರಾಜ್ಯ ಸರ್ಕಾರವನ್ನೆ ವಜಾ ಮಾಡುತ್ತಾರೆ. ಯಾವುದೇ ಸರ್ಕಾರ ಇದ್ದರೂ ಸಹ ನೀರು ಬಿಡುತ್ತಿದ್ದರು ಎಂದು ಹೇಳಿದ್ದಾರೆ. ಈ ಮೂಲಕ ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಬೇಕು. ಮಾಡುತ್ತೇವೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಹಲವು ದಿನಗಳಿಂದ ಬೇಡಿಕೊಂಡರೂ ಮೋದಿ ಸಮಯ ನೀಡುತ್ತಿಲ್ಲ. ಪ್ರಧಾನಮಂತ್ರಿ ಮೋದಿ ಎರಡು ರಾಜ್ಯಗಳನ್ನು ಚರ್ಚೆಗೆ ಕರೆಯಬೇಕಿತ್ತು. ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ದಟತನದಿಂದ ವರ್ತಿಸುತ್ತಿದ್ದಾರೆ. ತಮಿಳುನಾಡು ವಿರುದ್ಧ ಆರೋಪ ಮಾಡಿದರೆ ಯಾವ ಪ್ರಯೋಜನವಿಲ್ಲ. ಅವರ ಹಕ್ಕು ಅವರು ಕೇಳುತ್ತಿದ್ದಾರೆ, ನಮ್ಮ ಹಕ್ಕು ನಾವು ಕೇಳುತ್ತಿದ್ದೇವೆ ಎಂದರು.
ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಯರಿಸಬೇಕು. ಆದರೆ, ಕೇಂದ್ರ ಸರ್ಕಾರ ರಾಜಕೀಯ ಲಾಭಕ್ಕೆ ಕಾವೇರಿ ವಿವಾದದಲ್ಲಿ ಮಧ್ಯಪ್ರವೇಶ ಮಾಡುತ್ತಿಲ್ಲ. ಕಾವೇರಿ ವಿವಾದ ಬಗೆಯರಿಸುವುದು ಅವರಿಗೆ ಬೇಕಿಲ್ಲ. ಬದಲಿಗೆ ರಾಜ್ಯಗಳು ಕಿತ್ತಾಡಬೇಕು ಮೋದಿ ಸರ್ವಾಧಿಕಾರಿಯಾಗಿ ಇರಬೇಕು ಎನ್ನುವ ಭಾವನೆ ಹೊಂದಿದ್ದಾರೆ ಎಂದು ಕಿಡಿಕಾರಿದರು.
ಮೂಲ : ಅಂತರ್ಜಾಲ ಮಾಹಿತಿ
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…