ದಸರಾ ಅಂಗವಾಗಿ ರೈತ ದಸರಾ ಉಪ ಸಮಿತಿ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ವಿಜೇತರಿಗೆ ಪ್ರಥಮ ಬಹುಮಾನವಾಗಿ ಒಂದು ಲಕ್ಷ ರೂಪಾಯಿ, ದ್ವಿತೀಯ ಬಹುಮಾನ 80 ಸಾವಿರ ರೂಪಾಯಿ, ತೃತೀಯ ಬಹುಮಾನಕ್ಕೆ 60 ಸಾವಿರ ರೂಪಾಯಿ ಹಾಗೂ ಸಮಾಧಾನಕರ ಬಹುಮಾನವಾಗಿ 40 ಸಾವಿರ ರೂಪಾಯಿ ನೀಡಲಾಯಿತು.
ಸ್ಪರ್ಧಿಗಳಿಗೆ ಒಟ್ಟು 20 ನಿಮಿಷ ಕಾಲಾವಕಾಶ ನೀಡಲಾಗಿತ್ತು. ಬೆಳಿಗ್ಗೆ ಮತ್ತು ಸಾಯಂಕಾಲ ಅಂತಿಮ ಹಂತದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ಆನೇಕಲ್ ತಾಲೂಕಿನ ಕಗ್ಗಲೀಪುರದ ತನಿಷ್ ಫಾರಂ ಡೈರಿಯ ರಾಮಚಂದ್ರ ರೆಡ್ಡಿ ಅವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ 42.840 ಲೀ ಹಾಲು ಕರೆಯುವ ಮೂಲಕ ಪ್ರಥಮ ಸ್ಥಾನ ಪಡೆದು 1 ಲಕ್ಷ ರೂ. ಗೆದ್ದರು. ಚನ್ನರಾಯಪಟ್ಟಣ ತಾಲೂಕಿನ ತೋಟ ಗ್ರಾಮದ ಬಾಬು ಬಿನ್ ರೇವಣ್ಣ ಎಂಬವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ 42.300 ಲೀ ಹಾಲು ಕರೆಯುವ ಮೂಲಕ ದ್ವಿತೀಯ ಸ್ಥಾನ ಗಳಿಸಿ, 80 ಸಾವಿರ ರೂ. ಬಹುಮಾನ ಪಡೆದರು. ಆನೇಕಲ್ ತಾಲೂಕಿನ ವೆಟ್ ಫಾರಂ, ನಕುಂದಿ, ದೊಮ್ಮಸಂದ್ರ, ಅಜಯ್ ಪಿ.ರೆಡ್ಡಿ ಅಜಯ್ ಅವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ 41.300 ಲೀ ಕರೆಯುವ ಮೂಲಕ ತೃತೀಯ ಸ್ಥಾನ ಗಳಿಸಿ, 60 ಸಾವಿರ ರೂ.ಬಹುಮಾನ ಪಡೆದರು.