ದಸರಾ ಅಂಗವಾಗಿ  ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ | ಮೊದಲ ಬಹುಮಾನ 1 ಲಕ್ಷ |

October 8, 2024
10:20 PM

ದಸರಾ ಅಂಗವಾಗಿ ರೈತ ದಸರಾ ಉಪ ಸಮಿತಿ ಹಾಗೂ ಪಶುಪಾಲನಾ  ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ವಿಜೇತರಿಗೆ ಪ್ರಥಮ ಬಹುಮಾನವಾಗಿ ಒಂದು ಲಕ್ಷ ರೂಪಾಯಿ, ದ್ವಿತೀಯ ಬಹುಮಾನ 80 ಸಾವಿರ ರೂಪಾಯಿ, ತೃತೀಯ ಬಹುಮಾನಕ್ಕೆ 60 ಸಾವಿರ ರೂಪಾಯಿ ಹಾಗೂ ಸಮಾಧಾನಕರ ಬಹುಮಾನವಾಗಿ 40 ಸಾವಿರ ರೂಪಾಯಿ ನೀಡಲಾಯಿತು.

ಸ್ಪರ್ಧಿಗಳಿಗೆ ಒಟ್ಟು 20 ನಿಮಿಷ ಕಾಲಾವಕಾಶ ನೀಡಲಾಗಿತ್ತು. ಬೆಳಿಗ್ಗೆ ಮತ್ತು ಸಾಯಂಕಾಲ ಅಂತಿಮ ಹಂತದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ಆನೇಕಲ್ ತಾಲೂಕಿನ ಕಗ್ಗಲೀಪುರದ ತನಿಷ್ ಫಾರಂ ಡೈರಿಯ ರಾಮಚಂದ್ರ ರೆಡ್ಡಿ ಅವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ  42.840 ಲೀ ಹಾಲು ಕರೆಯುವ ಮೂಲಕ ಪ್ರಥಮ ಸ್ಥಾನ ಪಡೆದು 1 ಲಕ್ಷ ರೂ. ಗೆದ್ದರು. ಚನ್ನರಾಯಪಟ್ಟಣ ತಾಲೂಕಿನ ತೋಟ ಗ್ರಾಮದ ಬಾಬು ಬಿನ್ ರೇವಣ್ಣ ಎಂಬವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ  42.300 ಲೀ ಹಾಲು ಕರೆಯುವ ಮೂಲಕ ದ್ವಿತೀಯ ಸ್ಥಾನ ಗಳಿಸಿ, 80 ಸಾವಿರ ರೂ. ಬಹುಮಾನ ಪಡೆದರು. ಆನೇಕಲ್ ತಾಲೂಕಿನ ವೆಟ್ ಫಾರಂ, ನಕುಂದಿ, ದೊಮ್ಮಸಂದ್ರ, ಅಜಯ್ ಪಿ.ರೆಡ್ಡಿ ಅಜಯ್ ಅವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ  41.300 ಲೀ ಕರೆಯುವ ಮೂಲಕ ತೃತೀಯ ಸ್ಥಾನ ಗಳಿಸಿ, 60 ಸಾವಿರ ರೂ.ಬಹುಮಾನ ಪಡೆದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ
May 3, 2026
7:10 AM
by: ಮಿರರ್‌ ಡೆಸ್ಕ್
ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ
May 3, 2026
7:02 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror