ಮಹಾದಾಯಿ ನದಿ ನೀರಿನ ವಿಷಯದಲ್ಲಿ ಪಕ್ಷಬೇಧ ಮರೆತು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಕಳಸಾ ಬಂಡೂರಿಯಿಂದ 3.5 ಟಿಎಂಸಿ ನೀರು ಬಿಡುಗಡೆಗೆ ಗೋವಾ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ. ಹೀಗಿರುವಾಗ ನ್ಯಾಯಾಲಯದಲ್ಲಿ ಪ್ರಬಲ ವಾದ ಮಂಡಿಸಬೇಕಾಗಿದೆ ಎಂದು ತಿಳಿಸಿದ್ದಾರೆ. ಗೋದಾವರಿ, ಕೃಷ್ಣಾ, ಕಾವೇರಿ ನದಿಗಳ ಜೋಡಣೆ ಮಾಡುವಂತೆ ಮನವಿ ಮಾಡುವುದಾಗಿ ತಿಳಿಸಿದ ಅವರು, ನಮ್ಮ ಪಾಲಿನ ನೀರು ಹಂಚಿಕೆ ಮಾಡಬೇಕು. ಈ ಸಂಬಂಧ ಪ್ರಧಾನಿ ಹಾಗೂ ಕೇಂದ್ರ ನೀರಾವರಿ ಸಚಿವರಿಗೆ ಎರಡು ಬಾರಿ ಪತ್ರ ಬರೆದಿದ್ದೆ. ಇದರ ಪರಿಣಾಮ ಸದ್ಯ 15 ಟಿಎಂಸಿ ನೀರು ಬಿಡಲಾಗಿದೆ. ಆದರೆ ಈ ಪ್ರಮಾಣವನ್ನು 25 ಟಿಎಂಸಿಗೆ ಹೆಚ್ಚಳ ಮಾಡಬೇಕಾಗಿದ ಎಂದು ಹೇಳಿದರು. ರಾಜಕೀಯ ಹೊರತುಪಡಿಸಿ ರಾಜ್ಯದ ಅಭಿವೃದ್ಧಿಗಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡಬೇಕಾಗಿದೆ. ಆಗ ಮಾತ್ರ ರಾಜ್ಯ ಮತ್ತು ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದ್ದಾರೆ.
ಗೋದಾವರಿ, ಕೃಷ್ಣ, ಕಾವೇರಿ, ನದಿ ನೀರು ಜೋಡಣೆಯ ನೀರಾವರಿ ಯೋಜನೆಯಡಿ ರಾಜ್ಯಕ್ಕೆ 25 ಟಿಎಂಸಿ ನೀರು ಕೊಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು, ಈ ಸಂಬಂಧ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಗೋದಾವರಿ, ಕಾವೇರಿ, ನದಿ ನೀರು ಜೋಡಣೆ ಯೋಜನೆಯಿಂದ ರಾಜ್ಯಕ್ಕೆ ಗೋದಾವರಿ ನೀರನ್ನು ಹಂಚಿಕೆ ಮಾಡದಿರುವ ಕೇಂದ್ರ ಜಲಶಕ್ತಿ ಸಚಿವಾಲಯದ ನಿರ್ಧಾರದಿಂದ ಆಘಾತವಾಗಿದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…