ರಾಜ್ಯದಾದ್ಯಂತ ನಾಳೆಯಿಂದ ನವೆಂಬರ್ 20 ರವರೆಗೆ 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಳೆಯಿಂದ ನವೆಂಬರ್ 20 ರವರೆಗೆ 6 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಚಿತ್ರದುರ್ಗ ಜಿಲ್ಲೆಯಾದ್ಯಂತ ನಾಳೆಯಿಂದ ನಡೆಯಲಿರುವ 6 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದಲ್ಲಿ ಮನೆ ಮನೆಗಳಿಗೆ ತೆರಳಿ ಜಾನುವಾರಗಳಿಗೆ ಲಸಿಕೆ ನೀಡುವುದರ ಜೊತೆಗೆ ದೇವರ ಎತ್ತುಗಳು ಹಾಗೂ ನಗರ ಪ್ರದೇಶದಲ್ಲಿನ ಬಿಡಾಡಿ ದನಗಳಿಗೂ ಲಸಿಕೆ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದ್ದಾರೆ. ಯಾವುದೇ ಜಾನುವಾರುಗಳು ಲಸಿಕೆಯಿಂದ ತಪ್ಪಿಸಿಕೊಳ್ಳಬಾರದು. ಶೇ.100 ರಷ್ಟು ಲಸಿಕಾ ಗುರಿ ತಲುಪಬೇಕು. ಲಸಿಕೆ ನೀಡಿದ ಪ್ರತಿ ಜಾನುವಾರು ಮಾಹಿತಿಯನ್ನು ತಪ್ಪದೇ ತಂತ್ರಾಂಶದಲ್ಲಿ ದಾಖಲಿಸುವಂತೆ ನಿರ್ದೇಶನ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel