ಹಸಿರು ಹೈಡ್ರೋಜನ್  ಪರಿಸರ ವ್ಯವಸ್ಥೆ ರೂಪಿಸಲು ಕ್ರಮ | ಜಾಗತಿಕ ಮಟ್ಟದ ಕೇಂದ್ರಗಳ ಸ್ಥಾಪನೆಗೆ  ಕ್ರಮ | 100 ಕೋಟಿ ರೂ.ಅನುದಾನ |

November 8, 2024
7:11 AM

ದೇಶದಲ್ಲಿ ಸಂಪೂರ್ಣ ಹಸಿರು ಹೈಡ್ರೋಜನ್  ಪರಿಸರ ವ್ಯವಸ್ಥೆ ರೂಪಿಸಲು  ಅಗತ್ಯವಾದ ಪರಿಣಿತಿ ಮತ್ತು ಸಂಪನ್ಮೂಲಗಳನ್ನು ಒಗ್ಗೂಡಿಸಲಾಗುತ್ತಿದ್ದು, ವಿಶ್ವದರ್ಜೆಯ ಕೇಂದ್ರಗಳನ್ನು ಸ್ಥಾಪಿಸಲು  ಕ್ರಮ ಕೈಗೊಳ್ಳಲಾಗಿದೆ ಎಂದು  ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್  ಜೋಷಿ ತಿಳಿಸಿದ್ದಾರೆ.

ಭಾರತದಲ್ಲಿ  ಹಸಿರು  ಹೈಡ್ರೋಜನ್  ಕುರಿತು  ಸಂಶೋಧನೆ, ಅಭಿವೃದ್ಧಿಗಾಗಿ ಶ್ರೇಷ್ಠ ಕೇಂದ್ರಗಳನ್ನು  ಸ್ಥಾಪಿಸಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು,  ಸಾರ್ವಜನಿಕ ಮತ್ತು ಖಾಸಗಿ ಘಟಕಗಳು  ಪ್ರಸ್ತಾವನೆ  ಸಲ್ಲಿಸಬಹುದಾಗಿದೆ.  ಹಸಿರು ಹೈಡ್ರೋಜನ್  ಉತ್ಪಾದನೆ, ಸಂಗ್ರಹಣೆ ಮತ್ತು ಬಳಕೆಯ ತಂತ್ರಜ್ಞಾನದ ಅಭಿವೃದ್ಧಿಗಾಗಿ ಕೆಲಸ ಮಾಡುವ  ಈ ಕೇಂದ್ರಗಳಿಗೆ ನೂರು ಕೋಟಿ ರೂಪಾಯಿಗಳನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿದ್ದಾರೆ. ಹಸಿರು  ಹೈಡ್ರೋಜನ್  ಮೂಲಕ ಕಡಿಮೆ ಕಾರ್ಬನ್  ಆರ್ಥಿಕತೆ ಪರಿವರ್ತನೆಗಾಗಿ ಅತ್ಯಾಧುನಿಕ ಸಂಶೋಧನೆ,  ಕೌಶಲ್ಯಾಭಿವೃದ್ದಿಗೆ ಒತ್ತು ನೀಡಲಾಗುತ್ತಿದೆ. ರಾಷ್ಟ್ರೀಯ ಹಸಿರು ಹೈಡ್ರೋಜನ್  ಮಿಷನ್ ಅನ್ನು  2023ರ ಜನವರಿ 4ರಂದು  ಆರಂಭಿಸಲಾಗಿದ್ದು,  2029-30 ಆರ್ಥಿಕ ವರ್ಷದವರೆಗೂ 19744  ಕೋಟಿ ರೂಪಾಯಿಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror