ದೇಶದಲ್ಲಿ ಸಂಪೂರ್ಣ ಹಸಿರು ಹೈಡ್ರೋಜನ್ ಪರಿಸರ ವ್ಯವಸ್ಥೆ ರೂಪಿಸಲು ಅಗತ್ಯವಾದ ಪರಿಣಿತಿ ಮತ್ತು ಸಂಪನ್ಮೂಲಗಳನ್ನು ಒಗ್ಗೂಡಿಸಲಾಗುತ್ತಿದ್ದು, ವಿಶ್ವದರ್ಜೆಯ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಷಿ ತಿಳಿಸಿದ್ದಾರೆ.
ಭಾರತದಲ್ಲಿ ಹಸಿರು ಹೈಡ್ರೋಜನ್ ಕುರಿತು ಸಂಶೋಧನೆ, ಅಭಿವೃದ್ಧಿಗಾಗಿ ಶ್ರೇಷ್ಠ ಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು, ಸಾರ್ವಜನಿಕ ಮತ್ತು ಖಾಸಗಿ ಘಟಕಗಳು ಪ್ರಸ್ತಾವನೆ ಸಲ್ಲಿಸಬಹುದಾಗಿದೆ. ಹಸಿರು ಹೈಡ್ರೋಜನ್ ಉತ್ಪಾದನೆ, ಸಂಗ್ರಹಣೆ ಮತ್ತು ಬಳಕೆಯ ತಂತ್ರಜ್ಞಾನದ ಅಭಿವೃದ್ಧಿಗಾಗಿ ಕೆಲಸ ಮಾಡುವ ಈ ಕೇಂದ್ರಗಳಿಗೆ ನೂರು ಕೋಟಿ ರೂಪಾಯಿಗಳನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿದ್ದಾರೆ. ಹಸಿರು ಹೈಡ್ರೋಜನ್ ಮೂಲಕ ಕಡಿಮೆ ಕಾರ್ಬನ್ ಆರ್ಥಿಕತೆ ಪರಿವರ್ತನೆಗಾಗಿ ಅತ್ಯಾಧುನಿಕ ಸಂಶೋಧನೆ, ಕೌಶಲ್ಯಾಭಿವೃದ್ದಿಗೆ ಒತ್ತು ನೀಡಲಾಗುತ್ತಿದೆ. ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅನ್ನು 2023ರ ಜನವರಿ 4ರಂದು ಆರಂಭಿಸಲಾಗಿದ್ದು, 2029-30 ಆರ್ಥಿಕ ವರ್ಷದವರೆಗೂ 19744 ಕೋಟಿ ರೂಪಾಯಿಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…