ಪ್ಲಾಸ್ಟಿಕ್ ದುಷ್ಪರಿಣಾಮದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

July 25, 2022
10:30 PM

ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಿರುವ ಹಿನ್ನಲೆಯಲ್ಲಿ 2016ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆ ಹಾಗೂ 2021ರಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಸಂಬಂಧಿಸಿದ ಅಧಿಕಾರಿಗಳು ಚಾಚು ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ನಿರ್ದೇಶನ ನೀಡಿದರು.

Advertisement
Advertisement
ಅವರು ಸೋಮವಾರ ಮಂಗಳೂರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು 2016ರಂತೆ ಪ್ಲಾಸ್ಟಿಕ್ ಧ್ವಜಗಳು, ಕ್ಯಾಂಡಿಸ್ಟಿಕ್‍ಗಳು, ಐಸ್‍ಕ್ರೀಮ್ ಸ್ಟಿಕ್‍ಗಳು, ಪ್ಲೇಟ್‍ಗಳು, ಕಪ್‍ಗಳು, ಚಮಚಗಳು, ಫೋರ್ಕ್‍ಗಳು, ಟ್ರೇಗಳು, ಸ್ವೀಟ್ ಬಾಕ್ಸ್, ಸಿಗರೇಟ್ ಪ್ಯಾಕ್‍ಗಳು ಸೇರಿದಂತೆ ಇತ್ಯಾದಿಗಳನ್ನು ಅವುಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆಯನ್ನು 2022ರ ಜುಲೈ 1 ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದವರು ತಿಳಿಸಿದರು.

Advertisement
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‍ಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ನಿಷೇಧಿತ ವಸ್ತುಗಳು ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ಮಾತನಾಡಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಪರಿಸರ ಇಲಾಖೆ ಅಧಿಕಾರಿ ಕೀರ್ತಿ ಕುಮಾರ್, ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು, ಮಾರಾಟಗಾರರಾದ ಸಂದೀಪ್ ಶೆಣೈ, ವಚನ್ ಶೆಟ್ಟಿ ಹಾಗೂ ಇತರರು ಸಭೆಯಲ್ಲಿದ್ದರು.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !
May 7, 2024
11:33 AM
by: ಪ್ರಬಂಧ ಅಂಬುತೀರ್ಥ
Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |
May 7, 2024
11:08 AM
by: ಸಾಯಿಶೇಖರ್ ಕರಿಕಳ
ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |
May 7, 2024
7:00 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror