ಕರಾವಳಿ ಭಾಗದ ಜನರಿಗೆ ವಿಶ್ವಾಸ ಮೂಡಿಸಲು ಕ್ರಮ | ಕರಾವಳಿಯಲ್ಲಿ ಕೋಮು ಚಟುವಟಿಕೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ | ಗೃಹ ಸಚಿವ ಡಾ. ಪರಮೇಶ್ವರ್ ಎಚ್ಚರಿಕೆ

May 3, 2025
9:54 PM

ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಕೋಮು ಹಿಂಸಾಚಾರ ವಿರೋಧಿ ಕಾರ್ಯಪಡೆ ರಚಿಸುವುದಾಗಿ ಗೃಹ ಸಚಿವ ಪರಮೇಶ್ವರ್  ಮಂಗಳೂರಿನಲ್ಲಿ ಹೇಳಿದ್ದಾರೆ. ಐಜಿ ಮಟ್ಟದ ಅಧಿಕಾರಿ ಇದರ ನೇತೃತ್ವ ವಹಿಸಲಿದ್ದಾರೆ  ಎಂದು ಅವರು ಹೇಳಿದ್ದಾರೆ.

ಕರಾವಳಿ ಜಿಲ್ಲೆಯಲ್ಲಿ  ಶಾಂತಿ ಸುವ್ಯವಸ್ಥೆ ಪಾಲನೆ ಮಾಡಿ  ಕರಾವಳಿ ಭಾಗದಲ್ಲಿ  , ಜನರಿಗೆ ವಿಶ್ವಾಸ ಮೂಡಿಸಲು  ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದರು. ಕೋಮುಗಲಭೆ  ನಿಯಂತ್ರಣಕ್ಕಾಗಿ  ವಿಶೇಷ ಕಾರ್ಯಪಡೆಯನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೀಮಿತವಾಗಿ ಒಂದೆರಡು ವಾರದೊಳಗೆ ರಚಿಸಲಾಗುವುದು.  ಇನ್ನು ಮುಂದೆ  ಪ್ರಚೋದನಾಕಾರಿ ಹೇಳಿಕೆಗಳನ್ನು ಯಾರೇ ನೀಡಿದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ  ಎಂದು ಸೂಚಿಸಿದರು.

ಗುಂಪು ಹತ್ಯೆ ಪ್ರಕರಣದಲ್ಲಿ ಈಗಾಗಲೇ 21 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯಬಾರದು. ಯಾವುದೇ ಕಾರಣಕ್ಕೂ ಕರಾವಳಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಲು ಬಿಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ರಚನಾತ್ಮಕ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ”ಗೆ ಭೇಟಿ ನೀಡಿ. Update ಪಡೆಯಲು ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror