ಆಹಾರ ಕಲಬೆರಕೆ ದೂರುಗಳ ವಿರುದ್ಧ ಸರ್ಕಾರ ಕಠಿಣ ಹಾಗೂ ತ್ವರಿತ ಕ್ರಮ ಕೈಗೊಳ್ಳುತ್ತಿದೆ. ಕಲಬೆರಕೆಯ ದೂರುಗಳು ಬಂದ ತಕ್ಷಣ ಸರ್ಕಾರ ತನಿಖೆ ನಡೆಸುತ್ತದೆ. ಆಹಾರ ಪದಾರ್ಥಗಳು ಮಾನವ ಬಳಕೆಗೆ ಯೋಗ್ಯವಾಗಿಲ್ಲದಿದ್ದರೆ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಿ ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಲೋಕಸಭೆಯಲ್ಲಿ ಹೇಳಿದ್ದಾರೆ.
ಸದಸ್ಯ ನವೀನ್ ಜಿಂದಾಲ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಹಾರಗಳ ಗುಣಮಟ್ಟ ತಪಾಸಣೆಗಾಗಿ ಭಾರತೀಯ ಆಹಾರ ಸುರಕ್ಷತೆ ಹಾಗೂ ಮಾನದಂಡಗಳ ಪ್ರಾಧಿಕಾರ- ಎಫ್ಎಸ್ಎಸ್ಎಐ ದೇಶಾದ್ಯಂತ 242 ಪ್ರಯೋಗಾಲಯಗಳು, ನಾಲ್ಕು ರೆಫರಲ್ ಪ್ರಾಯೋಗಾಲಯಗಳು ಹಾಗೂ ಮೊಬೈಲ್ ಪರೀಕ್ಷಾ ಪ್ರಾಯೋಗಾಲಗಳನ್ನು ಹೊಂದಿದೆ ಎಂದು ವಿವರಿಸಿದರು. ಆಹಾರ ಕಲಬೆರಕೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ಸರ್ಕಾರ ಸಾಮಾಜಿಕ ಮಾಧ್ಯಮವನ್ನು ವ್ಯಾಪಕವಾಗಿ ಬಳಸುತ್ತಿದೆ. ರಾಷ್ಟ್ರೀಯ ಗ್ರಾಹಕ ಸಹಾಯವಾಣಿ, ಗ್ರಾಹಕರ ರಕ್ಷಣೆಗೆ ಒಂದು ದೊಡ್ಡ ಸಾಧನವಾಗಿದೆ ಎಂದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…