Advertisement
MIRROR FOCUS

ಚೀನಾದ ಗಡಿ ಪ್ರದೇಶದಲ್ಲಿ ಪ್ರಬಲ ಭೂಕಂಪನ | ಬರೋಬ್ಬರಿ 100ಕ್ಕೂ ಹೆಚ್ಚು ಜನರ ಸಾವು | 200ಕ್ಕೂ |ಹೆಚ್ಚು ಮಂದಿಗೆ ಗಾಯ

Share

ಪ್ರಕೃತಿ ಮುನಿಸು(Disaster) ಯಾವಾಗ ಎಲ್ಲಿ ಯಾವ ರೂಪದಲ್ಲಿ ಬರುತ್ತದೆ ಅಂತ ಹೇಳಲು ಅಸಾಧ್ಯ. ಇದೀಗ ಚೀನಾದ ಗನ್ಸು-ಕಿಂಗ್ಹೈ (China’s Gansu) ಗಡಿ ಪ್ರದೇಶದಲ್ಲಿ ಭೀಕರ ಭೂಕಂಪ (Earthquake) ಸಂಭವಿಸಿದ್ದು, 111 ಮಂದಿ ಸಾವನ್ನಪ್ಪಿದ್ದಾರೆ. 230ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರವು (EMSC) ಭೂಕಂಪದ ತೀವ್ರತೆಯನ್ನು 6.1 ಎಂದು ಗುರುತಿಸಿದೆ. ಆದ್ರೆ ಚೀನಾದ ಸರ್ಕಾರಿ ಮಾಧ್ಯಮ ಭೂಕಂಪದ ತೀವ್ರತೆ 6.2 ಎಂದು ತಿಳಿಸಿದೆ. ಭೂಕಂಪದ ಕೇಂದ್ರ ಬಿಂದು ಪಶ್ಚಿಮ-ನೈಋತ್ಯಕ್ಕೆ 102 ಕಿಮೀ ದೂರದಲ್ಲಿರುವ ಗನ್ಸು (Gansu) ಪ್ರಾಂತ್ಯದ ರಾಜಧಾನಿ ಲಾನ್‌ಝೌ ಬಳಿ 35 ಕಿಮೀ ಆಳದಲ್ಲಿ ಪತ್ತೆಯಾಗಿದೆ.

Advertisement
Advertisement
Advertisement

ಕ್ವಿಂಗ್‌ಹೈ ಪ್ರಾಂತ್ಯದ ಹಲವು ಭಾಗಗಳಲ್ಲಿಯೂ ಭೂಮಿ ಕಂಪಿಸಿದ ಅನುಭವವಾಗಿದೆ. ವಿಪತ್ತು ನಿರ್ವಹಣೆ, ಕಡಿತ ಮತ್ತು ಪರಿಹಾರಕ್ಕಾಗಿ ಚೀನಾದ ರಾಷ್ಟ್ರೀಯ ಆಯೋಗ ಮತ್ತು ತುರ್ತು ನಿರ್ವಹಣೆಯ ಸಚಿವಾಲಯವು 4ನೇ ಹಂತದ ಪರಿಹಾರ, ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಭೂಕಂಪದ ನಂತರ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಪ್ರಮುಖ ನಿರ್ದೇಶನ ನೀಡಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ಹುಡುಕಾಟ ಮತ್ತು ರಕ್ಷಣಾ ಪ್ರಯತ್ನಗಳು, ಸಂಕಷ್ಟಕ್ಕೆ ಸಿಲುಕಿರುವ ಜನರ ಪುನರ್ವಸತಿಗಳ ಸುರಕ್ಷತೆ ಖಚಿತಪಡಿಸಿಕೊಳ್ಳಲಾಗುತ್ತಿದೆ.

Advertisement

ಚೀನಾ ಹವಾಮಾನ ಪರಿಸ್ಥಿತಿಯೂ ಶೀತಮಯವಾಗುತ್ತಿದೆ. ಮಂಗಳವಾರ ಬೆಳಗ್ಗೆ ಭೂಕಂಪ ಸಂಭವಿಸಿದ ಸಮೀಪದ ಲಿನ್ಕ್ಸಿಯಾ, ಗನ್ಸುನಲ್ಲಿ ತಾಪಮಾನ ಮೈನಸ್ 14 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಕಳೆದ ಒಂದು ವಾರದಿಂದ ಪ್ರಾರಂಭವಾದ ಶೀತದ ಅಲೆ ದೇಶದಾದ್ಯಂತ ವ್ಯಾಪಿಸುತ್ತಲೇ ಇದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ. ಸದ್ಯ ಭೂಕಂಪದಿಂದ ಕೆಲವು ನೀರು, ವಿದ್ಯುತ್, ಸಾರಿಗೆ, ಸಂಪರ್ಕ ಮತ್ತು ಇತರ ಮೂಲಸೌಕರ್ಯಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.

– ಅಂತರ್ಜಾಲ ಮಾಹಿತಿ

Advertisement

The official Xinhua News Agency, as quoted by The Associated Press, said that 100 people died in the province of Gansu and another 11 in the neighboring province of Qinghai in the quake. More than 200 people were injured in Gansu and Qinghai provinces, said Xinhua, adding that the quake struck in Gansu’s Jishishan county, about 5 kilometers (3 miles) from the provincial boundary with Qinghai.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಾವಯವ ಕೃಷಿ ಎಂದರೆ ಏನು..?

https://youtu.be/VwddfpkQ94Y?si=LMz9u08OYbG4B2il

4 hours ago

ನ.23 | ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ | ಕೃಷಿ ವಿಚಾರಗೋಷ್ಠಿ | ಅಡಿಕೆ ರೋಗಗಳ ಬಗ್ಗೆ ಮಾಹಿತಿ ವಿನಿಮಯ |

ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…

5 hours ago

ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…

24 hours ago

ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ

ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…

24 hours ago

ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |

ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…

24 hours ago