ಪೋಷಕರ ಸಭೆಗೆ ಹೆದರಿ ಶಾಲಾ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ |

November 18, 2022
1:47 PM

ಶಾಲೆಯಲ್ಲಿ ನಡೆಯುವ ಪಾಲಕರ ಸಭೆಯನ್ನು ತಪ್ಪಿಸುವುದಕ್ಕಾಗಿ ವಿದ್ಯಾರ್ಥಿಯೊಬ್ಬ ಆತ್ನಹತ್ಯೆಗೆ ಯತ್ನಿಸಿದ ಘಟನೆ ಲಕ್ನೋದಲ್ಲಿ ನಡೆದಿದೆ. ಪಾಲಕರ ಸಭೆಯಲ್ಲಿ ಪಾಲಕರು ಶಿಕ್ಷಕರನ್ನು ಭೇಟಿಯಾಗುವುದನ್ನು ತಪ್ಪಿಸುವುದಕ್ಕಾಗಿ ಲಕ್ನೋದ 9 ನೇ ತರಗತಿಯ ವಿದ್ಯಾರ್ಥಿ ಈ ಕೃತ್ಯ ನಡೆಸಿದ್ದಾನೆ.

ಗೋಮತಿ ನಗರ ವಿಸ್ತರಣೆಯ ನಿವಾಸಿ ಆದಿತ್ಯ ತಿವಾರಿ ಎಂಬ 9 ನೇ ತರಗತಿಯ ವಿದ್ಯಾರ್ಥಿ ರೈಲ್ವೇ ಹಳಿಯಲ್ಲಿ ಗಾಯಗೊಂಡಿದ್ದು, ಇದೀಗ ಅವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಶಾಲೆಯ ವಿದ್ಯಾರ್ಥಿಯಾಗಿರುವ ಈತ ತನ್ನ ವ್ಯಾಸಂಗದಲ್ಲಿ ಉತ್ತಮವಾಗಿದ್ದು, ಆದರೆ ಅವನು ತನ್ನ ಕೊನೆಯ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ಕಾರಣ ಪಾಲಕ-ಶಿಕ್ಷಕರ ಸಭೆಯನ್ನು ಕರೆಯಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿ ಸಭೆಯಿಂದ ತಪ್ಪಿಸಿಕೊಳ್ಳುತ್ತಿದ್ದು, ಆದಿತ್ಯನ ಪೋಷಕರನ್ನು ಭೇಟಿಯಾಗಲು ಮನೆಗೆ ಹೋಗುವುದಾಗಿ ಶಿಕ್ಷಕರು ನಿರ್ಧರಿಸಿದ್ದರು. ಇದನ್ನು ತಿಳಿದ ಆದಿತ್ಯ ಹೆದರಿದ ತನ್ನ ಜೀವನವನ್ನು ಅಂತ್ಯಗೊಳಿಸಲು ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಅದಕ್ಕೂ ಮುನ್ನ ಪತ್ರ ಬರೆದಿದ್ದ, ಹೀಗಾಗಿ ಘನೆಯ ಕಾರಣ ತಿಳಿದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror