ರಾಜ್ಯದಲ್ಲಿ ಕ್ಯಾನ್ಸರ್‌ ಪ್ರಮಾಣ ಹೆಚ್ಚಳ ಕುರಿತು ಅಧ್ಯಯನ ನಡೆಸುವಂತೆ  ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ

January 10, 2025
6:48 AM

ರಾಜೀವ್‌ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕ್ಯಾನ್ಸರ್‌ ಪ್ರಮಾಣ ಹೆಚ್ಚಳ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು. ಕ್ಯಾನ್ಸರ್‌ ಚಿಕಿತ್ಸೆಗೆ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ರಾಜ್ಯದಲ್ಲಿಯೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.  ನಿಮ್ಹಾನ್ಸ್ ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ತಿಳಿಸಿದ್ದಾರೆ.  2024-25 ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ 4 ಸಾವಿರದ 331 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ 3 ಸಾವಿರದ 99 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ರ 3ಸಾವಿರದ 5 ಕೋಟಿ ವೆಚ್ಚ ಮಾಡಲಾಗಿದೆ ಎಂದು ಹೇಳಿದ್ದಾರೆ. ಗದಗ, ಕೊಪ್ಪಳ, ಕಾರವಾರ,ಕೊಡಗು ಜಿಲ್ಲೆಗಳಲ್ಲಿ ನಿರ್ಮಾಣ ಹಂತದಲ್ಲಿರುವ 450 ಹಾಸಿಗೆ ಆಸ್ಪತ್ರೆಗಳ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ  ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror