ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು. ಕ್ಯಾನ್ಸರ್ ಚಿಕಿತ್ಸೆಗೆ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ರಾಜ್ಯದಲ್ಲಿಯೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ. ನಿಮ್ಹಾನ್ಸ್ ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ತಿಳಿಸಿದ್ದಾರೆ. 2024-25 ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ 4 ಸಾವಿರದ 331 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ 3 ಸಾವಿರದ 99 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ರ 3ಸಾವಿರದ 5 ಕೋಟಿ ವೆಚ್ಚ ಮಾಡಲಾಗಿದೆ ಎಂದು ಹೇಳಿದ್ದಾರೆ. ಗದಗ, ಕೊಪ್ಪಳ, ಕಾರವಾರ,ಕೊಡಗು ಜಿಲ್ಲೆಗಳಲ್ಲಿ ನಿರ್ಮಾಣ ಹಂತದಲ್ಲಿರುವ 450 ಹಾಸಿಗೆ ಆಸ್ಪತ್ರೆಗಳ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…