ಹಾಸನ ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆಗೆ ಆವರಿಸಿರುವ ಬಿಳಿ ಸುಳಿ ರೋಗದ ಅಧ್ಯಯನಕ್ಕಾಗಿ ಕೇಂದ್ರ ಕೃಷಿ ಇಲಾಖೆಯ ತಜ್ಞರ ತಂಡವೊಂದು ಹಾಸನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆದಿದೆ.
ನಾಲ್ಕು ದಿನಗಳ ಹಿಂದೆ ಸಂಸದ ಶ್ರೇಯಸ್ ಪಟೇಲ್, ಕೇಂದ್ರ ಕೃಷಿ ಸಚಿವರಿಗೆ ಮನವಿ ಸಲ್ಲಿಸಿ ರೋಗದ ಬಗ್ಗೆ ಅಧ್ಯಯನ ಮಾಡಿ ರೋಗಕ್ಕೆ ಕಾರಣ ಹಾಗೂ ಅದರ ಬಗ್ಗೆ ಮಾಹಿತಿ ನೀಡಲು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹಾಸನಕ್ಕೆ ಆಗಮಿಸಿದ ತಂಡವು ಹೊಳೆನರಸೀಪುರ, ಆಲೂರು, ಬೇಲೂರು, ಚನ್ನರಾಯಪಟ್ಟಣ, ಅರಸೀಕೆರೆ ಸೇರಿದಂತೆ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಮೆಕ್ಕೆಜೋಳ ಬೆಳೆಗಾರರೊಂದಿಗೆ ಸಂವಾದ ನಡೆಸಿದ ತಜ್ಞರ ತಂಡ ಹಾನಿಗೊಳಗಾದ ಸಸ್ಯಗಳ ಮಾದರಿಗಳನ್ನು ಪ್ರಯೋಗಾಲಯ ವಿಶ್ಲೇಷಣೆಗಾಗಿ ಸಂಗ್ರಹಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಶ್ರೇಯಸ್ ಪಟೇಲ್ ವಿಜ್ಞಾನಿಗಳ ತಂಡವು ರೋಗದ ನಿಖರ ಕಾರಣ ಗುರುತಿಸುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel