ಸುಬ್ರಹ್ಮಣ್ಯ ಉಪನ್ಯಾಸಕರ ವೇತನ ಬಾಕಿ | ಕಲ್ಮಡ್ಕ ಗ್ರಾಪಂ ಅಧ್ಯಕ್ಷ ಮಹೇಶ್‌ ಕುಮಾರ್‌ ಕರಿಕಳ ಮನವಿಗೆ ಸ್ಪಂದಿಸಿದ ಸರ್ಕಾರ |

September 18, 2023
10:27 AM
ಕುಕ್ಕೆ ಸುಬ್ರಹ್ಮಣ್ಯದ  ಕೆ.ಎಸ್.ಎಸ್.ಕಾಲೇಜು ಮತ್ತು ಎಸ್.ಎಸ್.ಪಿ.ಯು. ಕಾಲೇಜಿನ ಉಪನ್ಯಾಸಕರು ಮತ್ತು ಪ್ರೌಢಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳ ವೇತನ ಸಮಸ್ಯೆ ಬಗ್ಗೆ ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ಸಮಸ್ಯೆಗೆ ಸ್ಪಂದಿಸಿದ್ದರು.

ಕುಕ್ಕೆ ಸುಬ್ರಹ್ಮಣ್ಯದ  ಕೆ.ಎಸ್.ಎಸ್.ಕಾಲೇಜು ಮತ್ತು ಎಸ್.ಎಸ್.ಪಿ.ಯು. ಕಾಲೇಜಿನ ಉಪನ್ಯಾಸಕರು ಮತ್ತು ಪ್ರೌಢಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಕಳೆದ ಕೆಲ ತಿಂಗಳುಗಳಿಂದ ವೇತನ ಬಾಕಿಯಾಗಿತ್ತು. ಈ ಬಗ್ಗೆ ಹಲವು ಬಾರಿ ಆಡಳಿತ ಮಂಡಳಿ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ  ವೇತನ ಪಾವತಿಗೆ ಕ್ರಮ ಆಗಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ಸಮಸ್ಯೆಗೆ ಸ್ಪಂದಿಸಿದ್ದರು.

Advertisement

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾನ ಸಮಿತಿ ಮಾಜಿ ಸದಸ್ಯ ಹಾಗೂ ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ಅವರು ಉಪನ್ಯಾಸಕರ ಸಂಕಷ್ಟದ ಬಗ್ಗೆ ಮಾಹಿತಿ ಪಡೆದಿದ್ದರು. ಈ ಬಗ್ಗೆ ಮುತುವರ್ಜಿ ವಹಿಸಿದ ಮಹೇಶ್ ಕುಮಾರ್ ಅವರು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿದ್ದರು. ಸಮಸ್ಯೆಗೆ ಸ್ಪಂದಿಸಿದ ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಂಡಿದ್ದರು.

ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಅವರು ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಕಾಳಜಿಯಿಂದ ಕೆಲಸ ಮಾಡುತ್ತಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror