ಕುಕ್ಕೆ ಸುಬ್ರಹ್ಮಣ್ಯದ ಕೆ.ಎಸ್.ಎಸ್.ಕಾಲೇಜು ಮತ್ತು ಎಸ್.ಎಸ್.ಪಿ.ಯು. ಕಾಲೇಜಿನ ಉಪನ್ಯಾಸಕರು ಮತ್ತು ಪ್ರೌಢಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಕಳೆದ ಕೆಲ ತಿಂಗಳುಗಳಿಂದ ವೇತನ ಬಾಕಿಯಾಗಿತ್ತು. ಈ ಬಗ್ಗೆ ಹಲವು ಬಾರಿ ಆಡಳಿತ ಮಂಡಳಿ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ವೇತನ ಪಾವತಿಗೆ ಕ್ರಮ ಆಗಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ಸಮಸ್ಯೆಗೆ ಸ್ಪಂದಿಸಿದ್ದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾನ ಸಮಿತಿ ಮಾಜಿ ಸದಸ್ಯ ಹಾಗೂ ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ಅವರು ಉಪನ್ಯಾಸಕರ ಸಂಕಷ್ಟದ ಬಗ್ಗೆ ಮಾಹಿತಿ ಪಡೆದಿದ್ದರು. ಈ ಬಗ್ಗೆ ಮುತುವರ್ಜಿ ವಹಿಸಿದ ಮಹೇಶ್ ಕುಮಾರ್ ಅವರು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿದ್ದರು. ಸಮಸ್ಯೆಗೆ ಸ್ಪಂದಿಸಿದ ಸಭಾಧ್ಯಕ್ಷ ಯು ಟಿ ಖಾದರ್ ಅವರು ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಂಡಿದ್ದರು.
ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಅವರು ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಕಾಳಜಿಯಿಂದ ಕೆಲಸ ಮಾಡುತ್ತಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…