ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಿಪಿಸಿಆರ್ ಐ ಕಿದು ನೆಟ್ಟಣ, ರೋಟರಿ ಕ್ಲಬ್ ಸುಬ್ರಹ್ಮಣ್ಯ , ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜೆನ್, ಇವುಗಳ ಜಂಟಿ ಆಶಯದಲ್ಲಿ ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ತ್ರಿಮೂರ್ತಿ ಹಾಗೂ ಸಿಬ್ಬಂದಿ ವರ್ಗ, ಸಿ ಪಿ ಸಿ ಆರ್ ಐ ಕಿದು ನೆಟ್ಟಣದ ತಾಂತ್ರಿಕ ಅಧಿಕಾರಿ ಗೋಪಾಲಕೃಷ್ಣ, ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಗೋಪಾಲ್ ಎಣ್ಣೆ ಮಜಲ್, ನಿಯೋಜಿತ ಅಧ್ಯಕ್ಷ ಪ್ರಶಾಂತ್ ಕೋಡಿಬೈಲ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯದ ಅಧ್ಯಕ್ಷ ವಿಶ್ವನಾಥ ನಡುತೋಟ ರೋಟರಿ ಕ್ಲಬ್ ಕಾರ್ಯದರ್ಶಿ ರವಿ ಕಕ್ಕೆ ಪದವು, ಮುಂತಾದವರು ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel