ಸರ್ಕಾರದಿಂದ ರೈತರಿಗಾಗಿ ವಿವಿಧ ಹಾಗೂ ಹಲವಾರು ರೀತಿಯ ಧನ ಸಹಾಯ ಯೋಜನೆಗಳು ಜಾರಿಗೆ ಬರುತ್ತಲೇ ಇರುತ್ತವೆ. ಆದರೆ ಅದು ರೈತರ ಪಾಲಿಗೆ ಎಷ್ಟರಮಟ್ಟಿಗೆ ತಲುಪುತ್ತೆ ಅನ್ನೋದು ಗೊತ್ತಿಲ್ಲ. ರೈತರ ಹಿತದೃಷ್ಠಿಯಿಂದ ಸರ್ಕಾರವು ಹಲವು ಯೋಜನೆಗಳಿಗೆ ಸಬ್ಸಿಡಿ, ಸಹಾಯಧನವನ್ನು ನೀಡುತ್ತದೆ. ರೈತರಿಗೆ ಕೃಷಿ ಸಲಕರಣೆ ಪಡೆಯಲು ಸಬ್ಸಿಡಿಯನ್ನು ಕೂಡಾ ಸರ್ಕಾರದಿಂದ ನೀಡಲಾಗುತ್ತದೆ.
ಕರ್ನಾಟಕದ ಕೃಷಿ ಇಲಾಖೆಯಿಂದ ರಾಜ್ಯದಾದ್ಯಂತ ಇರುವ ಎಲ್ಲಾ ಕೃಷಿ ಮಾಡುವ ರೈತರಿಗೆ ಕೃಷಿ ಉತ್ಪನ್ನ ಸಂಸ್ಕರಣೆ ಯಂತ್ರಗಳನ್ನು ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳಪಡುವವರಿಗೆ ಶೇಕಡಾ 90% ಸಬ್ಸಿಡಿ ಸಹಾಯಧನವನ್ನು ನೀಡಲಾಗುತ್ತದೆ. ಹಾಗೂ ಇತರೆ ಅಭ್ಯರ್ಥಿಗಳಿಗೆ ಶೇಕಡಾ 50% ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಈ ಯಂತ್ರಗಳನ್ನು ಪಡೆಯಲು ಎಲ್ಲಾ ರೈತರಿಗೆ ಕೃಷಿ ಇಲಾಖೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಕೃಷಿ ಇಲಾಖೆ ಸಂಸ್ಕರಣಾ ಯಂತ್ರ ಸಲಕರಣೆಗಾಗಿ 2022-23 ನೇ ಸಾಲಿನ ಕೃಷಿ ಸಂಸ್ಕರಣಾ ಯೋಜನೆಯಡಿಯಲ್ಲಿ ಕೃಷಿ ಉತ್ಪನ್ನ ಸಂಸ್ಕರಣಾ ಸಲಕರಣೆಯನ್ನು ನೀಡುತ್ತಿದೆ.
ಹೆಚ್ಚಿನ ಮಾಹಿತಿಗೆ ಸ್ಥಳೀಯ ಕೃಷಿ ಸಹಾಯಕ ನಿರ್ದೇಶಕರ ಕಚೇರಿಗೆ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದು ಮತ್ತು ಅಲ್ಲಿಯೇ ಅರ್ಜಿ ಸಲ್ಲಿಸಬಹುದು. ಈ ಯಂತ್ರಗಳನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿರುತ್ತದೆ.
ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
11.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…