Advertisement
ಸುದ್ದಿಗಳು

ರೈತರಿಗೆ ಕೃಷಿ ಸಲಕರಣೆಗಳಿಗೆ ಸಹಾಯಧನ…..! | ಮನೆಯಲ್ಲೇ ಸ್ವಂತ ಉದ್ಯಮ ಮಾಡುವವರಿಗೆ ಲಾಭ..! |

Share

ಸರ್ಕಾರದಿಂದ ರೈತರಿಗಾಗಿ ವಿವಿಧ ಹಾಗೂ ಹಲವಾರು ರೀತಿಯ ಧನ ಸಹಾಯ ಯೋಜನೆಗಳು ಜಾರಿಗೆ ಬರುತ್ತಲೇ ಇರುತ್ತವೆ. ಆದರೆ ಅದು ರೈತರ ಪಾಲಿಗೆ ಎಷ್ಟರಮಟ್ಟಿಗೆ ತಲುಪುತ್ತೆ ಅನ್ನೋದು ಗೊತ್ತಿಲ್ಲ.  ರೈತರ ಹಿತದೃಷ್ಠಿಯಿಂದ ಸರ್ಕಾರವು ಹಲವು ಯೋಜನೆಗಳಿಗೆ ಸಬ್ಸಿಡಿ, ಸಹಾಯಧನವನ್ನು ನೀಡುತ್ತದೆ. ರೈತರಿಗೆ ಕೃಷಿ ಸಲಕರಣೆ ಪಡೆಯಲು ಸಬ್ಸಿಡಿಯನ್ನು ಕೂಡಾ ಸರ್ಕಾರದಿಂದ ನೀಡಲಾಗುತ್ತದೆ.

ಕರ್ನಾಟಕದ ಕೃಷಿ ಇಲಾಖೆಯಿಂದ ರಾಜ್ಯದಾದ್ಯಂತ ಇರುವ ಎಲ್ಲಾ ಕೃಷಿ ಮಾಡುವ ರೈತರಿಗೆ ಕೃಷಿ ಉತ್ಪನ್ನ ಸಂಸ್ಕರಣೆ ಯಂತ್ರಗಳನ್ನು ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳಪಡುವವರಿಗೆ ಶೇಕಡಾ 90% ಸಬ್ಸಿಡಿ ಸಹಾಯಧನವನ್ನು ನೀಡಲಾಗುತ್ತದೆ. ಹಾಗೂ ಇತರೆ ಅಭ್ಯರ್ಥಿಗಳಿಗೆ ಶೇಕಡಾ 50% ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಈ ಯಂತ್ರಗಳನ್ನು ಪಡೆಯಲು ಎಲ್ಲಾ ರೈತರಿಗೆ ಕೃಷಿ ಇಲಾಖೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಕೃಷಿ ಇಲಾಖೆ ಸಂಸ್ಕರಣಾ ಯಂತ್ರ ಸಲಕರಣೆಗಾಗಿ 2022-23 ನೇ ಸಾಲಿನ ಕೃಷಿ ಸಂಸ್ಕರಣಾ ಯೋಜನೆಯಡಿಯಲ್ಲಿ ಕೃಷಿ ಉತ್ಪನ್ನ ಸಂಸ್ಕರಣಾ ಸಲಕರಣೆಯನ್ನು ನೀಡುತ್ತಿದೆ.

ಕೃಷಿ ಸಲಕರಣೆ

  • ಹಿಟ್ಟಿನ ಗಿರಣಿ
  • ಕಾರ ಕುಟ್ಟುವ ಯಂತ್ರ
  • ಎಣ್ಣೆ ಗಾಣ ಯಂತ್ರ
  • ಶಾವಿಗೆ ಯಂತ್ರ
  • ಕಬ್ಬಿನ ಹಾಲು ಯಂತ್ರ, ಇತ್ಯಾದಿ

ನೀವು ಸಲ್ಲಿಸಬೇಕಾದ ಪ್ರಮುಖ ದಾಖಲೆಗಳು :

  • ಪಹಣಿ
  • ಆಧಾರ್ ಕಾರ್ಡ್‌
  • ಬ್ಯಾಂಕ್‌ ಪಾಸ್‌ ಬುಕ್‌
  • ಭಾವಚಿತ್ರ
  • ಜಾತಿ ಪ್ರಮಾಣ ಪತ್ರ

ಹೆಚ್ಚಿನ ಮಾಹಿತಿಗೆ ಸ್ಥಳೀಯ ಕೃಷಿ ಸಹಾಯಕ ನಿರ್ದೇಶಕರ ಕಚೇರಿಗೆ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದು ಮತ್ತು ಅಲ್ಲಿಯೇ ಅರ್ಜಿ ಸಲ್ಲಿಸಬಹುದು. ಈ ಯಂತ್ರಗಳನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಮಾರ್ಚ್‌ 31 ಕೊನೆಯ ದಿನಾಂಕವಾಗಿರುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

3 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

9 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

9 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

9 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

9 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

1 day ago