ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಕಿರು ಆಹಾರ ಸಂಸ್ಕರಣೆ ಅಥವಾ ಮೌಲ್ಯವರ್ಧನೆ ಘಟಕಸ್ಥಾಪನೆಗೆ ಶೇಕಡ 50 ರ ಸಹಾಯಧನದಲ್ಲಿ ಗರಿಷ್ಟ ರೂಪಾಯಿ 15 ಲಕ್ಷದವರೆಗೆ ಬ್ಯಾಂಕ್ ಲೋನ್ ಮುಖಾಂತರ ಸಹಾಯಧನದ ಅವಕಾಶವಿದ್ದು, ಈ ಯೋಜನೆಯ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ ಸೆ. 16 ರಂದು ಕಾರವಾರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಲಾಗಿದೆ. ಈ ಯೋಜನೆಯಡಿ ಲಭ್ಯವಾಗುವ ಸಾಲ ಸೌಲಭ್ಯ ಹಾಗೂ ಸಹಾಯಧನ ಕುರಿತು ಸಂಪೂರ್ಣ ಮಾಹಿತಿಯನ್ನು ಕೆಪೆಕ್ ಸಂಸ್ಥೆ, ಬೆಂಗಳೂರು ರವರು ನೀಡಲಿದ್ದು, ಆಸಕ್ತ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ತಿಳಿಸಿದೆ. ರೈತರು ಹೆಚ್ಚಿನ ಮಾಹಿತಿಗಾಗಿ ಯೋಜನೆಯ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸುಜಯ ಭಟ್ ದೂ.ಸಂಖ್ಯೆ: 8088597319 / 9482287323 ನ್ನು ಸಂಪರ್ಕಿಸುಂತೆ ಉತ್ತರಕನ್ನಡ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

