ಅಡಿಕೆ ಬೆಳೆಗಾರರಿಗೆ ಪ್ರತೀ ವರ್ಷ ಕಾಡುವ ಸಮಸ್ಯೆ ಕೊಳೆರೋಗ. ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದಂತೆಯೇ ಅಡಿಕೆಗೆ ಕೊಳೆರೋಗ ಬಾಧಿಸುತ್ತದೆ. ಇದರ ನಿಯಂತ್ರಣಕ್ಕೆ ಅನೇಕ ವರ್ಷಗಳಿಂದಲೂ ಬೋರ್ಡೋ ದ್ರಾವಣ ಸಿಂಪಡಣೆ ಮಾಡಲಾಗುತ್ತಿದೆ. ಈಚೆಗೆ ಕೆಲವು ವರ್ಷಗಳಿಂದ ಹೊಸ ಪ್ರಯತ್ನ ನಡೆಯುತ್ತಿದೆ. ಕೆಲವು ಯಶಸ್ಸು ಕಾಣುತ್ತದೆ. ಇನ್ನೂ ಕೆಲವು ಔಷಧಗಳು ಪ್ರಯೋಗ ಹಂತದಲ್ಲಿ ಸೋಲುತ್ತದೆ.
ಹೀಗಾಗಿ ಅಡಿಕೆ ಬೆಳೆಗಾರರಿಗೆ ಕೊಳೆರೋಗಕ್ಕೆ ಈಗ ಯಾವುದು ಸೂಕ್ತ ಎನ್ನುವ ಗೊಂದಲ ಇತ್ತು. ಪಾರಂಪರಿಕವಾಗಿ ಈಗಲೂ 1:1 ರ ಅನುಪಾತದಲ್ಲಿ ಕಾಪರ್‌ಸಲ್ಫೇಟ್ ಹಾಗೂ ಸುಣ್ಣದ ಮಿಶ್ರಣವನ್ನು ಸಿಂಪಡಣೆ ಮಾಡುತ್ತಾರೆ. ಮಳೆಗಾಲದ ಆರಂಭದಲ್ಲಿ ಹಾಗೂ ನಂತರ ಪ್ರತೀ 30 ದಿನಗಳಿಗೊಮ್ಮೆ ಸಿಂಪಡಣೆ ಮಾಡುತ್ತಿದ್ದಾರೆ. ಆದರೆ ಈಚೆಗೆ ಅಡಿಕೆ ಬೆಳೆಗಾರರು ಬೋರ್ಡೋ ಬದಲು ಪರ್ಯಾಯ ಯಾವುದು ಎಂದು ಪ್ರಶ್ನಿಸುತ್ತಿದ್ದರು. ಇದೀಗ ಈ ಪ್ರಯೋಗದಲ್ಲಿ ಯಶಸ್ಸಾದ ಔಷಧ ಒಂದರ ಬಗ್ಗೆ ಸಿಪಿಸಿಆರ್‌ಐ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಇದರ ಸಂಪೂರ್ಣ ವಿವರ ಈ ವಿಡಿಯೋದಲ್ಲಿದೆ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಕಲಜೀವಿಗಳ ಆಡುಂಬೊಲ ನಮ್ಮೀ ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…