ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಮುಂದಿನ ಒಂದು ವಾರದೊಳಗೆ ಕಬ್ಬಿಗೆ ದರ ನಿಗದಿ ಮಾಡಲಾಗುವುದು ಎಂದು ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭರವಸೆ ನೀಡಿದರು.
ರಾಜ್ಯದಲ್ಲಿ ಕಬ್ಬು ಬೆಳೆಗಾರರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಉತ್ತಮ ದರ ಸಿಗದೆ ಕಂಗಾಲಾಗಿದ್ದಾರೆ. ಹೀಗಾಗಿ ರೈತ ಸಂಘಟನೆಗಳು ಸರ್ಕಾರವನ್ನು ಎಚ್ಚರಿಸಿ ಸೂಕ್ತ ದರ ಲಭ್ಯವಾಗುವಂತೆ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದ್ದರು.
ಕಬ್ಬು ಬೆಳೆಗಾರರ ಬೇಡಿಕೆಗೆ ಸೂಕ್ತ ಮನ್ನಣೆ ದೊರೆಯದೇ ಇದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಹೇಳಿದ್ದರು. ಇದೆಲ್ಲದರ ನಡುವೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು ವಾರದಲ್ಲಿ ಕಬ್ಬಿಗೆ ದರ ನಿಗದಿ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಬೆಲೆ ನಿಗದಿ ಹಾಗೂ ಹಿಂದಿನ ವರ್ಷದ ಹಣ ಪಾವತಿ ಮಾಡದೆ ಸಕ್ಕರೆ ಕಾರ್ಖಾನೆ ತೆರೆಯವಾರದು ಎಂದು ಕಬ್ಬು ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿ ಕೆಲವು ಕಡೆ ಪ್ರತಿಭಟನೆ ನಡೆಸಿದ್ದರು.
ಈ ನಡುವೆ ಸಚಿವ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕಬ್ಬು ಬೆಳೆಗಾರರ ಸಂಘದ ಪ್ರಮುಖರ ಜೊತೆ ಸಭೆ ನಡೆಸಿ ಚರ್ಚಿಸಿದರು.ಮುಂದೆ ಇಲಾಖೆಯ ಬಗ್ಗೆ ಯಾವುದೇ ದೂರುಗಳಿದ್ದರೆ ಕಾಲ್ ಸೆಂಟರ್ ಮೂಲಕ ತಿಳಿಸಬಹುದು ಎಂದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.