ರೈತರ ಕಬ್ಬಿನ ಬಾಕಿ ಬಿಲ್ ಶೇಕಡಾ 99 ರಷ್ಟು ಪಾವತಿ ಮಾಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಕಬ್ಬು ನುರಿಸುವ ಹಂಗಾಮು ನವೆಂಬರ್ ತಿಂಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಬೆಳಗಾವಿಯಲ್ಲಿ ಹೇಳಿದ್ದಾರೆ.…..ಮುಂದೆ ಓದಿ….
ಈಗಾಗಲೇ ರಾಜ್ಯದ ಸಕ್ಕರೆ ಕಾರ್ಖಾನೆಗಳ ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡಿರುವ 22 ಸಾವಿರ ಕೋಟಿ ರೂಪಾಯಿ ಪೈಕಿ 20 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಶೇಕಡ 99ರಷ್ಟು ಬಿಲ್ ಪಾವತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕೆಲ ಸಕ್ಕರೆ ಕಾರ್ಖಾನೆಗಳ ಉತ್ಪಾದಿತ ಸಕ್ಕರೆ ಮಾರಾಟವನ್ನು ತಾಂತ್ರಿಕ ಕಾರಣದಿಂದ ತಡೆಹಿಡಿಯಲಾಗಿದ್ದು, ಇದೀಗ ಅಂತಹ ಸಕ್ಕರೆ ಕಾರ್ಖಾನೆಗಳಿಗೆ ಸಕ್ಕರೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಈಗ ಬಾಕಿ ಇರುವ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದರು. ನಷ್ಟದಲ್ಲಿರುವ ಸರ್ಕಾರಿ ಸಕ್ಕರೆ ಕಾರ್ಖಾನೆಗಳನ್ನು ಗುತ್ತಿಗೆ ನೀಡಲಾಗಿದ್ದು, ಇದೀಗ ಅವುಗಳು ಲಾಭದಲ್ಲಿವೆ, ಮುಧೋಳದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು 30 ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ಹರಾಜು ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದರು.