ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ ಸಾವಯುವ ಕೃಷಿ ಮೂಲಕ ಕಬ್ಬು ಬೆಳೆದು ಯಶಸ್ವಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದಿಂದ ಪ್ರೇರಣೆಗೊಂಡು ಚಾಮರಾಜನಗರ ಜೆಲ್ಲೆ ಗೂಳಿಪುರದ ಬಿ. ನಂದೀಶ್ ಸ್ವಾವಲಂಬಿ ಬದುಕು ಕಟ್ಟಿಕೊಂಡು ಯುವಕರಿಗೆ ಮಾದರಿಯಾಗಿದ್ದಾರೆ. ಕಳೆದ ಏಳೆಂಟು ವರ್ಷದಿಂದ ಸಾವಯುವ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಕಬ್ಬಿನ ಉತ್ಪನ್ನಗಳಿಗೆ ತಮ್ಮದೇ ಬ್ರ್ಯಾಂಡ್ ಸೃಷ್ಟಿಸಿ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ ನಿರ್ಭರ ಯೋಜನೆಯಿಂದ ಪ್ರೇರಣೆಗೊಂಡು ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ಸ್ವಾವಲಂಬಿ ಬದುಕು ಕಟ್ಟಿಕೊಂಡಿರುವುದಾಗಿ ಬಿ. ನಂದೀಶ್ ಹೇಳುತ್ತಾರೆ.
ಸಾವಯುವ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಕಬ್ಬಿನ ಉತ್ಪನ್ನಗಳಿಗೆ ತಮ್ಮದೇ ಬ್ರ್ಯಾಂಡ್ ಸೃಷ್ಟಿಸಿ ಮಾರಾಟ ಮಾಡುತ್ತಿರುವ ನಂದೀಶ್ ಅವರಿಂದ ಹಲವಾರು ಮಂದಿ ಬೆಲ್ಲ ಖರೀದಿ ಮಾಡುತ್ತಾರೆ. ಸಾವಯುವ ಕೃಷಿಯಲ್ಲಿ ಬೆಳೆದ ಕಬ್ಬಿನಿಂದ ತಯಾರಿಸಿದ ಬೆಲ್ಲ ರಾಸಾಯನಿಕ ಮುಕ್ತವಾಗಿದ್ದು, ಹೆಚ್ಚು ರುಚಿಕರವಾಗಿದೆ. ಹಲವು ವರ್ಷಗಳಿಂದ ಇಲ್ಲಿಯೇ ಬೆಲ್ಲ ಖರೀದಿ ಮಾಡುತ್ತಿರುವುದಾಗಿ ಎಂದು ಗ್ರಾಹಕರಾದ ಪುಷ್ಪಾ ಹೇಳುತ್ತಾರೆ. ವಿಷಮುಕ್ತ ಆಹಾರ ನೀಡುವ ಉದ್ದೇಶದಿಂದ ನಂದೀಶ್ ಸಾವಯವ ಕೃಷಿ ಮೂಲಕ ಬೆಲ್ಲ ತಯಾರಿಸಿ ಮಾರಾಟ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎನ್ನುತ್ತಾರೆ ಸ್ಥಳೀಯರಾದ ಮದ್ದೂರು ದೊರೆಸ್ವಾಮಿ.
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…
ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…
ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…