ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ

May 21, 2025
11:11 AM

ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು  ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ ಪಾವತಿಸುವಂತೆ ಜಿಲ್ಲಾಧಿಕಾರಿ ಡಾ ಕುಮಾರ ಸೂಚಿಸಿದ್ದಾರೆ.

ಸಕ್ಕರೆ ಕಾರ್ಖಾನೆಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು,  ಕಳೆದ ಸಾಲಿನಲ್ಲಿ ನಿಗದಿತ ಅವಧಿಯಲ್ಲಿ ಹಣ ಪಾವತಿ ಮಾಡಿಲ್ಲ್ಲ ಎಂದು ರೈತರು ದೂರುಗಳನ್ನು ಸಲ್ಲಿಸಿದ್ದು, ಈ ಬಾರಿ ಇದಕ್ಕೆ ಆಸ್ಪದ ನೀಡದಂತೆ ತಿಳಿಸಿದ್ದಾರೆ.  ಸಕ್ಕರೆ ಆಯುಕ್ತರು ನೀಡುವ ದಿನಾಂಕದಂದು ಎಲ್ಲಾ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕೆಲಸಕ್ಕೆ ಚಾಲನೆ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.  ಸಕ್ಕರೆ ಕಾರ್ಖಾನೆ ಮಾಲೀಕರು ತಮ್ಮ ವ್ಯಾಪ್ತಿಗೆ ನಿಗದಿಪಡಿಸಿರುವ ಕಬ್ಬನ್ನು ಮಾತ್ರ ಕಟಾವು ಮಾಡಲು ಅವಕಾಶವಿರುತ್ತದೆ. ಇದನ್ನು ಮನದಟ್ಟು ಮಾಡಿಕೊಂಡು ಕಾರ್ಖಾನೆಗಳಲ್ಲಿ ಸಣ್ಣ ಪುಟ್ಟ ಆಂತರಿಕ ತೊಂದರೆಗಳಿದ್ದಲ್ಲಿ ಈಗಲೇ ಸರಿಪಡಿಸಿಕೊಳ್ಳಿ ಎಂದು ಸೂಚಿಸಿದ್ದಾರೆ.  ಮೈ ಶುಗರ್ ಸಕ್ಕರೆ ಕಾರ್ಖಾನೆಯು 4 ಲಕ್ಷದ 20 ಸಾವಿರ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಿದೆ.  ಪ್ರತಿ ದಿನ 4000ಮೆಟ್ರಿಕ್ ಟನ್ ಕಬ್ಬು ನುರಿಸುವ ಸಾಮರ್ಥ್ಯವಿದೆ ಎಂದು ಸಕ್ಕರೆ ಕಾರ್ಖಾನೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror