ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ ಪಾವತಿಸುವಂತೆ ಜಿಲ್ಲಾಧಿಕಾರಿ ಡಾ ಕುಮಾರ ಸೂಚಿಸಿದ್ದಾರೆ.
ಸಕ್ಕರೆ ಕಾರ್ಖಾನೆಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ನಿಗದಿತ ಅವಧಿಯಲ್ಲಿ ಹಣ ಪಾವತಿ ಮಾಡಿಲ್ಲ್ಲ ಎಂದು ರೈತರು ದೂರುಗಳನ್ನು ಸಲ್ಲಿಸಿದ್ದು, ಈ ಬಾರಿ ಇದಕ್ಕೆ ಆಸ್ಪದ ನೀಡದಂತೆ ತಿಳಿಸಿದ್ದಾರೆ. ಸಕ್ಕರೆ ಆಯುಕ್ತರು ನೀಡುವ ದಿನಾಂಕದಂದು ಎಲ್ಲಾ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕೆಲಸಕ್ಕೆ ಚಾಲನೆ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ. ಸಕ್ಕರೆ ಕಾರ್ಖಾನೆ ಮಾಲೀಕರು ತಮ್ಮ ವ್ಯಾಪ್ತಿಗೆ ನಿಗದಿಪಡಿಸಿರುವ ಕಬ್ಬನ್ನು ಮಾತ್ರ ಕಟಾವು ಮಾಡಲು ಅವಕಾಶವಿರುತ್ತದೆ. ಇದನ್ನು ಮನದಟ್ಟು ಮಾಡಿಕೊಂಡು ಕಾರ್ಖಾನೆಗಳಲ್ಲಿ ಸಣ್ಣ ಪುಟ್ಟ ಆಂತರಿಕ ತೊಂದರೆಗಳಿದ್ದಲ್ಲಿ ಈಗಲೇ ಸರಿಪಡಿಸಿಕೊಳ್ಳಿ ಎಂದು ಸೂಚಿಸಿದ್ದಾರೆ. ಮೈ ಶುಗರ್ ಸಕ್ಕರೆ ಕಾರ್ಖಾನೆಯು 4 ಲಕ್ಷದ 20 ಸಾವಿರ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಿದೆ. ಪ್ರತಿ ದಿನ 4000ಮೆಟ್ರಿಕ್ ಟನ್ ಕಬ್ಬು ನುರಿಸುವ ಸಾಮರ್ಥ್ಯವಿದೆ ಎಂದು ಸಕ್ಕರೆ ಕಾರ್ಖಾನೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ…
ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…
ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್ ಮುಷ್ಕರವನ್ನು ಕೊನೆ ಕ್ಷಣದಲ್ಲಿ…
‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…
ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…