ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ರಾಜ್ಯ ಸರ್ಕಾರಕ್ಕೆ ಹಣಕಾಸಿನ ಸಮಸ್ಯೆ ಇದ್ದರೆ ಬಾಂಡ್ ಬಿಡುಗಡೆ ಮಾಡುವ ಮೂಲಕ ಸಾರ್ವಜನಿಕರಿಂದ ಹಣ ಪಡೆಯುವಂತೆ ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ ವಿಧಾನಸಭೆ ಸಭೆಯಲ್ಲಿ ಸಲಹೆ ನೀಡಿದ್ದಾರೆ.
ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ವಿಶೇಷ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಾಂಡ್ ಮೂಲಕ ಹಣ ಸಂಗ್ರಹಿಸಿ ಮೂರು ವರ್ಷದಲ್ಲಿ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ ಎಂದು ಮನವಿ ಮಾಡಿದ್ದಾರೆ. ಇದೇ ವೇಳೆ, ಕೇಂದ್ರ ಸರ್ಕಾರದ ಎಥೆನಾಲ್ ನೀತಿಯಿಂದ ಸಕ್ಕರೆ ಕಾರ್ಖಾನೆಗಳಿಗೆ ಅನುಕೂಲವಾಗಿದೆ. ಆದರೆ ನ್ಯೂನ್ಯತೆ ಸರಿಪಡಿಸಬೇಕು ಎಂದು ಅವರು ತಿಳಿಸಿದ್ದಾರೆ. ಎಥೆನಾಲ್ ಲಾಭಾಂಶ ಕಬ್ಬು ಬೆಳೆಗಾರರಿಗೂ ಸಿಗದೆ, ಪೆಟ್ರೋಲ್ ಬಳಸುವ ಗ್ರಾಹಕರಿಗೂ ಸಿಗದೇ ಮಧ್ಯವರ್ತಿಗಳ ಪಾಲಾಗುತ್ತಿದೆ. ಸರ್ಕಾರ ಕಬ್ಬು ಬೆಳೆಗಾರರಿಗೆ ಪ್ರೋತ್ಸಾಹ ನೀಡಬೇಕು ಎಂದು ಸದನದಲ್ಲಿ ಒತ್ತಾಯಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel