ಭೀಮಗಢ ಅರಣ್ಯ ಪ್ರದೇಶದೊಳಗಿರುವ ಗ್ರಾಮಗಳ ನಿವಾಸಿಗಳಿಗೆ ಸೂಕ್ತ ಪರಿಹಾರ ನೀಡಿ ಹಂತ-ಹಂತವಾಗಿ ಸ್ಥಳಾಂತರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ.
ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ತಾಳೇವಾಡಿಗೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಸಭೆ ನಡೆಸಿದ ಸಚಿವರು, ಪ್ರತಿ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ನೀಡಲು ಸರ್ಕಾರ ಸಿದ್ಧವಿದ್ದು, ಅರಣ್ಯವಾಸಿಗಳು ಸ್ವಯಂ ಪ್ರೇರಿತವಾಗಿ ಸ್ಥಳಾಂತರಕ್ಕೆ ಸಮ್ಮತಿಸಬೇಕು ಎಂದು ಮನವಿ ಮಾಡಿದರು. ಪ್ರಸ್ತುತ ಭೀಮಗಢ ದಟ್ಟಾರಣ್ಯದೊಳಗೆ ಒಟ್ಟು 13 ಜನವಸತಿಗಳಲ್ಲಿ 745 ಕುಟುಂಬಗಳಿದ್ದು, 3045 ಜನರು ವಾಸಿಸುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಪೂರ್ಣ ಗ್ರಾಮದ ಜನರು ಸ್ಥಳಾಂತರಕ್ಕೆ ಸಮ್ಮತಿಸಿದರೆ, ಅಂತಹ ಗ್ರಾಮಗಳ ಜನರಿಗೆ ಪುನರ್ವಸತಿ ಪರಿಹಾರ ನೀಡಿ, ಸ್ಥಳಾಂತರಕ್ಕೆ ಕ್ರಮ ವಹಿಸುವಂತೆ ಸಚಿವರು ಇದೇ ವೇಳೆ ಅಧಿಕಾರಿಗಳಿಗೆ ಸೂಚಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel