Advertisement
ಸುದ್ದಿಗಳು

ಸುಳ್ಯಕ್ಕೆ ಶುಭ ಸುದ್ದಿ | ವಿದ್ಯುತ್‌ ಸಮಸ್ಯೆ ನಿವಾರಣೆಗೆ ದಿಟ್ಟ ಹೆಜ್ಜೆ | ಬಹುಕಾಲದ ಬೇಡಿಕೆಗೆ ಶಂಕುಸ್ಥಾಪನೆ | |

Share

ಸುಳ್ಯದ ಜನತೆಗೆ ಶುಭ ಸುದ್ದಿ ಕೇಳಿಬಂದಿದೆ. ಸುಳ್ಯದ ಜನರ ಬಹುಕಾಲದ ಬೇಡಿಕೆಯಾಗಿದ್ದ 110 ಕೆವಿ ಸಬ್‌ ಸ್ಟೇಶನ್‌ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆಯಲಿದೆ. ಜ.10 ರಂದು ಸುಳ್ಯದಲ್ಲಿ ಶಂಕುಸ್ಥಾಪನೆ ನಡೆಯಲಿದೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವ ಎಸ್‌ ಅಂಗಾರ, ಸುಳ್ಯದ 110 ಕೆವಿ ಸಬ್‌ಸ್ಟೇಷನ್ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಜನವರಿ 10 ರಂದು ಶಂಕುಸ್ಥಾಪನೆ ನಡೆಯಲಿದೆ. ಸುಳ್ಯದ ವಿದ್ಯುತ್ ಸಬ್ ಸ್ಟೇಷನ್ ಬಳಿಯಲ್ಲಿ ಇಂಧನ ಸಚಿವರಾದ ವಿ.ಸುನಿಲ್ ಕುಮಾರ್‌ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.ಮಾಡಾವಿನಿಂದ ಸುಳ್ಯಕ್ಕೆ 110 ಕೆವಿ ಲೈನ್ ಕಾರಿಡಾರ್ 22 ಕಿ.ಮಿ.ಉದ್ದವಿದೆ. ಇದರಲ್ಲಿ 1.8 ಕಿ.ಮಿ. ಲೈನ್ ಇದೆ. ಹೊಸತಾಗಿ 19.2 ಕಿ.ಮಿ. ಲೈನ್ ಮತ್ತು ಸುಳ್ಯದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ‌ ಆಗಲಿದೆ. ಆಂಧ್ರಪ್ರದೇಶದ ಗುತ್ತಿಗೆದಾರರಿಗೆ ಕಾಮಗಾರಿ ವಹಿಸಲಾಗಿದೆ. ಕಾಮಗಾರಿ ಪೂರ್ತಿಯಾಗಲು 12 ತಿಂಗಳ ಕಾಲಾವಕಾಶ ಇದೆ. ಮಾಡಾವು-ಕೊಳ್ತಿಗೆ, ಪೆರ್ಲಂಪಾಡಿ,  ಮೂಲಕ ಕನಕಮಜಲು ಜಾಲ್ಸೂರು ಬೈತ್ತಡ್ಕ-ಅಜ್ಜಾವರ ಮೂಲಕ ಹೊಸ ಲೈನ್ ಹಾದು ಬರಲಿದೆ. ಈಗಿನ‌ ಮೆಸ್ಕಾಂ 33 ಕೆವಿ ಸಬ್ ಸ್ಟೇಷನ್ ಸಮೀಪ ಹೊಸ 110 ಸಬ್ ಸ್ಟೇಷನ್ ನಿರ್ಮಾಣ ಆಗಲಿದೆ. 22 ಮೀಟರ್‌ನ ಕಾರಿಡಾರ್ ನಿರ್ಮಾಣವಾಗಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 hour ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago