ಹಲವು ಸಮಯಗಳ ಬಳಿಕ ಸುಳ್ಯ ಅಭಿವೃದ್ಧಿಯ ಕಡೆಗೆ ಹೆಜ್ಜೆ ಹಾಕುತ್ತಿದೆ. ತಾಲೂಕಿನ 172 ರಸ್ತೆಗಳಿಗೆ ಟೆಂಡರ್ ಪ್ರಕ್ರಿಯೆ ನಡೆದ ಬಳಿಕ ಇದೀಗ ಸುಳ್ಯದ ಅನೇಕ ಸಮಯಗಳ ಬೇಡಿಕೆಯಾಗಿದ್ದ 110 ಕೆ.ವಿ. ವಿದ್ಯುತ್ ಸಬ್ ಸ್ಟೇಷನ್ ಹಾಗು 110 ಕೆ.ವಿ.ವಿದ್ಯುತ್ ಲೈನ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದೆ. ಈ ಬಗ್ಗೆ ಈಗಾಗಲೇ ಪತ್ರಿಕೆಗಳಲ್ಲಿ ಟೆಂಡರ್ ಪ್ರಕ್ರಿಯೆಯೂ ಆರಂಭವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸುಳ್ಯದಲ್ಲಿ 33 / 11 ಕೆ.ವಿ . ವಿದ್ಯುತ್ ಉಪಕೇಂದ್ರವನ್ನು 110 / 11 ಕೆವಿ ವಿದ್ಯುತ್ ಉಪಕೇಂದ್ರವನ್ನಾಗಿ ಉನ್ನತೀಕರಿಸುವುದು ಹಾಗು ಸಂಬಂಧಿತ ಪ್ರಸರಣ ಮಾರ್ಗದೊಂದಿಗೆ ನಿರ್ಮಿಸುವುದಕ್ಕಾಗಿ ಪತ್ರಿಕೆಯಲ್ಲಿ ಟೆಂಡರ್ ಆಹ್ವಾನ ಮಾಡಲಾಗಿದೆ. ಈ ಮೂಲಕ ಸುಳ್ಯದ ಇನ್ನೊಂದು ಪ್ರಮುಖ ಬೇಡಿಕೆಯೂ ಈಡೇರಿಕೆಯಾಗುತ್ತಿದೆ.
ಸುಳ್ಯದ ವಿದ್ಯುತ್ ಸಮಸ್ಯೆ ಹಲವು ಸಮಯಗಳಿಂದ ಕಾಡುತ್ತಿತ್ತು. ಈ ಬಗ್ಗೆ ಅನೇಕ ಹೋರಾಟಗಳು, ಮನವಿಗಳೂ ನಡೆದಿತ್ತು. ಕೃಷಿ ಸಂಘಟನೆಯಾದ ಭಾರತೀಯ ಕಿಸಾನ್ ಸಂಘ ಸೇರಿದಂತೆ ಹಲವಾರು ಸಂಘಟನೆಗಳು ಈ ಬಗ್ಗೆ ಹಲವು ಸುತ್ತಿನ ಪ್ರಯತ್ನ ನಡೆಸಿದ್ದವು. ಇದೀಗ ಸುಳ್ಯದ ಬಹುವರ್ಷದ ಬೇಡಿಕೆಯೊಂದು ಈಡೇರಿಕೆಯಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ, ಇಂಧನ ಸಚಿವ ಸುನಿಲ್ ಕುಮಾರ್ ಅವರು ಸುಳ್ಯದ ವಿದ್ಯುತ್ ಸಮಸ್ಯೆ ಬಗ್ಗೆ ಸಭೆ ನಡೆಸಿದ್ದರು ಹಾಗೂ ಸುಳ್ಯದ ಹಲವು ಮೂಲಭೂತ ಸಮಸ್ಯೆಗಳ ನಿವಾರಣೆ ಕಡೆಗೆ ವಿಶೇಷ ಕಾಳಜಿ ವಹಿಸಿದ್ದರು. ಸುಳ್ಯದ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಕಳೆದ ತಿಂಗಳು ಟೆಂಡರ್ ಪ್ರಕ್ರಿಯೆ ಆರಂಭವಾಗಿತ್ತು.172 ರಸ್ತೆಗಳಿಗೆ ಟೆಂಡರ್ ಕರೆಯಲಾಗಿತ್ತು.
ಇದೀಗ ಸುಳ್ಯದಲ್ಲಿ ಕೃಷಿಕರ ವಿದ್ಯುತ್ ಶುಲ್ಕ ಸಂಪೂರ್ಣ ಮನ್ನಾದ ಬಳಿಕವೂ ಕೃಷಿಕರ ಖಾತೆಯಲ್ಲಿ ಬಾಕಿ ಎಂದು ನಮೂದಾಗಿತ್ತು. ದ ಕ ಜಿಲ್ಲೆಯ ಉಳಿದ ಎಲ್ಲಾ ತಾಲೂಕುಗಳಲ್ಲಿ ಈ ಸಮಸ್ಯೆ ನಿವಾರಣೆಯಾದರೂ ಹಲವು ವರ್ಷಗಳಿಂದ ಸುಳ್ಯದಲ್ಲಿ ಮಾತ್ರಾ ಈ ಸಮಸ್ಯೆ ಕಾಡುತ್ತಿದೆ. ಇದಕ್ಕಾಗಿ ಇಂಧನ ಸಚಿವ ಸುನಿಲ್ ಕುಮಾರ್ ಅವರು ವಿಶೇಷ ಗಮನಹರಿಸುವ ಭರವಸೆಯನ್ನೂ ಈಚೆಗೆ ಭೇಟಿ ನೀಡಿದ ಭಾರತೀಯ ಕಿಸಾನ್ ಸಂಘದ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…