ಸುಳ್ಯದಲ್ಲಿ ಕಾಂಗ್ರೆಸ್‌ ಭಿನ್ನಮತ ಶಮನಕ್ಕೆ ಯತ್ನ ? | ಒಂದಾಗಿ ಸ್ಫರ್ಧೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ | ಸುಳ್ಯದಲ್ಲಿ ಸಭೆ ನಡೆಸಲು ಡಿಕೆಶಿ ಸೂಚನೆ ? |

April 14, 2023
10:17 PM

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ  ಕಾಂಗ್ರೆಸ್‌ ಭಿನ್ನಮತ ಶಮನಕ್ಕೆ ರಾಜ್ಯ ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ. ಕಾಂಗ್ರೆಸ್‌ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ಹಾಗೂ ಟಿಕೆಟ್‌ ಆಕಾಂಕ್ಷಿಯಾಗಿದ್ದ ನಂದಕುಮಾರ್‌ ಇಬ್ಬರನ್ನೂ ಬೆಂಗಳೂರಿನಲ್ಲಿ  ಮಾತುಕತೆ ನಡೆಸಿದ ಕಾಂಗ್ರೆಸ್‌ ಮುಖಂಡರು , ಭಿನ್ನಾಭಿಪ್ರಾಯ ಮರೆತು ಒಂದಾಗಿ ಸ್ಫರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಸದ್ಯ ಬಿ ಫಾರಂ ಯಾರಿಗೂ ನೀಡದೆ, ಒಂದಾಗಿ ಸ್ಫರ್ಧೆಗೆ ಇಳಿಯುವಂತೆ ತಿಳಿಸಿದೆ. ಜಿಲ್ಲೆಯ ಕಾಂಗ್ರೆಸ್‌ ಮುಖಂಡರು ಹಾಗೂ ರಮಾನಾಥ ರೈ ಅವರಿಗೆ ಭಿನ್ನಮತ ಶಮನಕ್ಕೆ ಸಭೆ ನಡೆಸಿ ವರದಿ ನೀಡುವಂತೆ ಕಾಂಗ್ರೆಸ್‌ ರಾಜ್ಯ ನಾಯಕರು ಸೂಚಿಸಿದ್ದಾರೆ. ಹೀಗಾಗಿ ಇದೀಗ ಮತ್ತೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು  ಕುತೂಹಲ ಮೂಡಿದೆ.

ನಂದಕುಮಾರ್
ಜಿ ಕೃಷ್ಣಪ್ಪ

ಈಗಾಗಲೇ ನಂದಕುಮಾರ್‌ ಪಕ್ಷೇತರವಾಗಿ ಸ್ಫರ್ಧೆಗೆ ನಿರ್ಧರಿಸಿದ್ದರು. ಕಾಂಗ್ರೆಸ್‌ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ಅವರು ಪ್ರಮುಖರನ್ನು  ಭೇಟಿ ಮಾಡಿದ್ದರು. ಇದೀಗ ಒಂದಾಗಿ ಚುನಾವಣೆಗೆ ಸ್ಫರ್ಧಿಸಲು ಹೈಕಮಾಂಡ್‌ ಸೂಚಿಸಿದ ಹಿನ್ನೆಲೆಯಲ್ಲಿ ಕುತೂಹಲ ಮೂಡಿದೆ. ಈ ಬಾರಿ ಸುಳ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಕಂಡುಬಂದಿತ್ತು. ಈ ಲಾಭವನ್ನು ಪಡೆಯಲು ಕಾಂಗ್ರೆಸ್‌ ಶಕ್ತವಾಗುತ್ತಾ, ವಿಫಲವಾಗುತ್ತಾ ಎನ್ನುವುದು  ಈಗಿನ ಕುತೂಹಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror