ಸುಳ್ಯದಲ್ಲಿ ಇದೀಗ ಕಾಂಗ್ರೆಸ್ ಉಚ್ಛಾಟಿತ ನಾಯಕರುಗಳ ಸಭೆ ಕಾಂಗ್ರೆಸ್ ಮುಖಂಡ ಮಹೇಶ್ ಕರಿಕಳ ಅವರ ಮನೆಯಲ್ಲಿ ನಡೆದಿದೆ. ಎಲ್ಲಾ ನಾಯಕರು ಒಟ್ಟಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ನೈಜ ವಿಚಾರ ಮನವರಿಕೆ ಮಾಡಲು ನಿರ್ಧರಿಸಲಾಗಿದೆ.
ಈ ಸಂದರ್ಭ ಹಲವು ಅಭಿಪ್ರಾಯಗಳನ್ನು ನಾಯಕರು ವ್ಯಕ್ತಪಡಿಸಿದರು. ಪಕ್ಷ ವಿರೋಧಿ ಚಟುವಟಿಕೆ ಈ ಹಿಂದಿನ ಎಲ್ಲಾ ಚುನಾವಣೆಯ ಸಂದರ್ಭವೂ ಆಗಿದೆ. ಈ ಹಿಂದೆ ಡಾ.ರಘು ಅವರು ಗೆಲ್ಲುವ ಸಂದರ್ಭ ನಡೆದ ಪಕ್ಷ ವಿರೋಧಿ ಚಟುವಟಿಕೆಗಳಿಗೆ ಯಾವ ಕ್ರಮವಾಗಿದೆ? ಎಂಬ ಪ್ರಶ್ನೆಯೂ ವ್ಯಕ್ತವಾಯಿತು.
ಈ ಬಾರಿ ಪಕ್ಷ ವಿರೋಧಿ ಚಟುವಟಿಕೆ ನಡೆದಿರಲಿಲ್ಲ, ಬದಲಾಗಿ ತಳಮಟ್ಟದ ಕಾಂಗ್ರೆಸ್ ಕಾರ್ಯಕರ್ತ ಆಯ್ಕೆ ಇದ್ದಿರುವ ಅಭ್ಯರ್ಥಿಯ ಆಯ್ಕೆ ನಡೆಯಬೇಕಿತ್ತು ಎನ್ನುವುದೇ ಬೇಡಿಕೆಯಾಗಿತ್ತು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಕೃಷ್ಣಪ್ಪ ಹಠಾವೋ ಕಾಂಗ್ರೆಸ್ ಬಚಾವೋ ಅಭಿಯಾನ ನಡೆಸಬೇಕು ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಯೂ ಆಗಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಯಿತು.
ಸಭೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಂದಕುಮಾರ್ ಸಹಿತ ಪ್ರಮುಖರು ಇದ್ದರು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…