ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಭಿನ್ನಮತ ಶಮನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ಹಾಗೂ ಟಿಕೆಟ್ ಆಕಾಂಕ್ಷಿಯಾಗಿದ್ದ ನಂದಕುಮಾರ್ ಇಬ್ಬರನ್ನೂ ಬೆಂಗಳೂರಿನಲ್ಲಿ ಮಾತುಕತೆ ನಡೆಸಿದ ಕಾಂಗ್ರೆಸ್ ಮುಖಂಡರು , ಭಿನ್ನಾಭಿಪ್ರಾಯ ಮರೆತು ಒಂದಾಗಿ ಸ್ಫರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಸದ್ಯ ಬಿ ಫಾರಂ ಯಾರಿಗೂ ನೀಡದೆ, ಒಂದಾಗಿ ಸ್ಫರ್ಧೆಗೆ ಇಳಿಯುವಂತೆ ತಿಳಿಸಿದೆ. ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ರಮಾನಾಥ ರೈ ಅವರಿಗೆ ಭಿನ್ನಮತ ಶಮನಕ್ಕೆ ಸಭೆ ನಡೆಸಿ ವರದಿ ನೀಡುವಂತೆ ಕಾಂಗ್ರೆಸ್ ರಾಜ್ಯ ನಾಯಕರು ಸೂಚಿಸಿದ್ದಾರೆ. ಹೀಗಾಗಿ ಇದೀಗ ಮತ್ತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ಕುತೂಹಲ ಮೂಡಿದೆ.
ಈಗಾಗಲೇ ನಂದಕುಮಾರ್ ಪಕ್ಷೇತರವಾಗಿ ಸ್ಫರ್ಧೆಗೆ ನಿರ್ಧರಿಸಿದ್ದರು. ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ಅವರು ಪ್ರಮುಖರನ್ನು ಭೇಟಿ ಮಾಡಿದ್ದರು. ಇದೀಗ ಒಂದಾಗಿ ಚುನಾವಣೆಗೆ ಸ್ಫರ್ಧಿಸಲು ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ಕುತೂಹಲ ಮೂಡಿದೆ. ಈ ಬಾರಿ ಸುಳ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಕಂಡುಬಂದಿತ್ತು. ಈ ಲಾಭವನ್ನು ಪಡೆಯಲು ಕಾಂಗ್ರೆಸ್ ಶಕ್ತವಾಗುತ್ತಾ, ವಿಫಲವಾಗುತ್ತಾ ಎನ್ನುವುದು ಈಗಿನ ಕುತೂಹಲ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.