ಸುಳ್ಯದ ಸರ್ಕಾರಿ ಆಸ್ಪತ್ರೆಯ ಬಳಿ ನಿಂತಿದ್ದ ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮೃತದೇಹವು ಪೆರಾಜೆಯ ಪೆರಂಗಜೆ ಗೌರೀಶ(30) ಎಂಬವರದು ಎಂದು ತಿಳಿದುಬಂದಿದೆ.
ಸುಮಾರು ನಾಲ್ಕು ದಿನಗಳಿಂದ ಮಾರುತಿ 800 ಕಾರು ಸುಳ್ಯ ಸರ್ಕಾರಿ ಆಸ್ಪತ್ರೆ ಬಳಿ ನಿಂತಿತ್ತು. ಭಾನುವಾರ ವಾಸನೆ ಬರುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಗಮನಿಸಿದಾಗ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದ ಗೌರೀಶ ಶುಕ್ರವಾರ ಸುಳ್ಯದ ಕಡೆಗೆ ಬಂದಿದ್ದರು ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಮಕ್ಕಳನ್ನು ಹೊಂದಿದ್ದರು.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…