ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಇಂದು ವರ್ಷದ ಮೊದಲ ಮಳೆ ಸುರಿದಿದೆ. ಸಂಜೆ ವೇಳೆಗೆ ಗುಡುಗು ಆರಂಭವಾಗಿದ್ದು, ನಂತರ ಗುಡುಗು–ಸಿಡಿಲು ಸಹಿತ ಮಳೆ ಧಾರಾಕಾರವಾಗಿ ಸುರಿಯಿತು. ಸುಬ್ರಹ್ಮಣ್ಯ, ಹರಿಹರ, ಕೊಲ್ಲಮೊಗ್ರ, ಗುತ್ತಿಗಾರು, ಪಂಜ, ಉಬರಡ್ಕ ಹಾಗೂ ಸುಳ್ಯ ಸೇರಿದಂತೆ ತಾಲೂಕಿನ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಕೆಲವೆಡೆ ಗಾಳಿಯೂ ಸಹ ಕಂಡುಬಂದಿದೆ. ಇದೇ ವೇಳೆ ಬೆಳ್ತಂಗಡಿ ತಾಲೂಕಿನ ವಿವಿದೆಡೆ, ಉಜಿರೆ, ಮಲೆನಾಡು ಭಾಗದ ಶೃಂಗೇರಿ, ಚಿಕ್ಕಮಗಳೂರು, ಶಿವಮೊಗ್ಗದ ಕೆಲವು ಕಡೆ, ಮಡಿಕೇರಿ, ಭಾಗಮಂಡಲದ ಕೆಲವು ಕಡೆ ಮಳೆಯಾಗಿದೆ. ಇದು ಅಕಾಲಿಕ ಮಳೆಯಾಗಿರುವುದರಿಂದ ಕೃಷಿಕರಿಗೆ ಸಂಕಷ್ಟ ತಂದಿತು. ಮುಂದಿನ ದಿನಗಳಲ್ಲಿ ಹವಾಮಾನ ಸ್ಥಿತಿಗತಿಯ ಮೇಲೆ ಕೃಷಿ ಕಾರ್ಯಗಳು ಅವಲಂಬಿತವಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…