ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆದು ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದು ತಳ್ಳಾಟ ನಡೆಯಿತು. ಕೆಲಕಾಲ ಗೊಂದಲದ ಗೂಡಾಗಿ ಪರಿಣಮಿಸಿದ ಸಭೆ ಬಳಿಕ ಪೊಲೀಸರ ಮಧ್ಯಪ್ರವೇಶವೂ ನಡೆಯಿತು.
ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆಯಲ್ಲಿ ಬುಧವಾರ ಸಾಮಾನ್ಯ ಸಭೆ ನಡೆಯಿತು. ಸುಳ್ಯದಲ್ಲಿ ಹಲವು ಸಮಯಗಳಿಂದ ಅಭಿವೃದ್ಧಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ವಿಪಕ್ಷದ ಸದಸ್ಯರು ಆರೋಪಿಸಿದರು. ಸಭೆಗೆ ಇಂಜಿನಿಯರ್ ಹಾಗೂ ಆರೋಗ್ಯಾಧಿಕಾರಿಗಳನ್ನು ಕರೆಯಿಸಿ ಎಂದು ವಿಪಕ್ಷಗಳು ಒತ್ತಾಯಿಸಿದವು. ಬಳಿಕ ವಿರೋಧ ಪಕ್ಷದ ಸದಸ್ಯರು ಸಭೆಯ ಮುಂಭಾಗಕ್ಕೆ ಬಂದು ಟೇಬಲ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ನಗರ ಪಂಚಾಯತ್ ಆಡಳಿತದ ವೈಫಲ್ಯದ ವಿರುದ್ಧ ಘೋಷಣೆ ಕೂಗಿದರು.
ಸುಳ್ಯ ನಗರಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರ ತಳ್ಳಾಟ #ಸುಳ್ಯ #sullia pic.twitter.com/iIaY50WcmX
— theruralmirror (@ruralmirror) November 2, 2022
ಈ ಸಂದರ್ಭ ಆಡಳಿತ ಪಕ್ಷ ಹಾಗೂ ವಿಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಮಾನ ಮರ್ಯಾದೆ ಶಬ್ದ ಬಳಕೆ , ವೈಯಕ್ತಿಕ ಚರ್ಚೆ, ತೀವ್ರ ಮಾತಿನ ಚಕಮಕಿ ನಡೆಯಿತು. ಅದಾದ ಬಳಿಕ ಮೋದಿ ಹೆಸರೂ ಉಲ್ಲೇಖವಾಯಿತು. ಹೀಗಾಗಿ ಮತ್ತಷ್ಟು ಚರ್ಚೆ ಚುರುಕಾಗಿ ಸದಸ್ಯರ ನಡುವೆ ತಳ್ಳಾಟ ನಡೆಯಿತು. ಬಳಿಕ ಸಭೆಗೆ ಪೊಲೀಸರು ಆಗಮಿಸಿದರು. ಸದಸ್ಯರನ್ನು ಅಧಿಕಾರಿಗಳು ಸಮಾಧಾನಪಡಿಸಿದರು. ಬಳಿಕ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ವಿರೋಧ ಪಕ್ಷದ ಸದಸ್ಯರ ಜೊತೆ ಮಾತುಕತೆ ನಡೆಸಿದರು. ಬಳಿಕ ಸಭೆ ಆರಂಭಗೊಂಡು ಮುಂದುವರಿಯಿತು.
ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಚರ್ಚೆ, ತಳ್ಳಾಟ #ಸುಳ್ಯ #sullia pic.twitter.com/NO7f3msyEp
— theruralmirror (@ruralmirror) November 2, 2022