ಸುಳ್ಯ ಎನ್ನೆoಪಿಯುಸಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ

June 12, 2022
10:14 PM

ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾ oಶುಪಾಲರಾದ  ಹರಿಣಿ ಪುತ್ತೂರಾಯ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು ಜ್ಞಾನ ಮತ್ತು ಬುದ್ಧಿ ಬಲದಿಂದ ಅವಕಾಶಗಳನ್ನು ಕಂಡು ಕೊಂಡು ಪರಿಪೂರ್ಣ ದಾರಿಯಲ್ಲಿ ಸಾಗಬೇಕು, ಇದಕ್ಕೆ ಶಿಕ್ಷಕರ,ಪೋಷಕರ ಸಹಕಾರ ಮುಖ್ಯ ಎಂದರು.

ಮುಖ್ಯ ಅತಿಥಿಗಳಾಗಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ ಎಂ ಬಾಲಚಂದ್ರ ಗೌಡ ಅವರು ಮಾತನಾಡಿ ವಿದ್ಯಾರ್ಥಿಗಳು ಸಂಸ್ಕಾರಯುತವಾಗಿ ವರ್ತಿಸಬೇಕು, ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಯಾಗಬೇಕು ಎಂದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ  ದಾಮೋದರ ಪಿ,  ಸಾವಿತ್ರಿ ಕೆ ಉಪಸ್ಥಿತ ರಿದ್ದರು. ವಿದ್ಯಾರ್ಥಿನಿಯರಾದ ಕೃತಿ ಜಿ ರಾವ್ ಮತ್ತು ನಿಶ್ವಿತಾ ಪ್ರಾರ್ಥಿಸಿದರು. ವಿ.ಕ್ಷೇಮಾಧಿಕಾರಿ ಸಾವಿತ್ರಿ ಕೆ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿನಿಯರಾದ ನಿಶ್ವಿತಾ ಮತ್ತು ಬಳಗದವರು ಆಶಯ ಗೀತೆ ಹಾಡಿದರು.ವಿದ್ಯಾರ್ಥಿ ಕ್ಷೇಮಾಧಿಕಾರಿ ದಾಮೋದರ ಪಿ ವಂದಿಸಿದರು. ಕನ್ನಡ ಉಪನ್ಯಾಸಕಿ ಕು.ಬೇಬಿ ವಿದ್ಯಾ ಪಿ.ಬಿ. ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಪ್ರಾoಶುಪಾಲರು ಕಾಲೇಜಿನ ನೀತಿ -ನಿಯಮಗಳು,ಕಾಲೇಜಿನಲ್ಲಿ ಆಯೋಜಿಸಲಾಗುವ ಕಾರ್ಯಕ್ರಮಗಳ ಮಾಹಿತಿಯನ್ನು ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror