ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾ oಶುಪಾಲರಾದ ಹರಿಣಿ ಪುತ್ತೂರಾಯ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು ಜ್ಞಾನ ಮತ್ತು ಬುದ್ಧಿ ಬಲದಿಂದ ಅವಕಾಶಗಳನ್ನು ಕಂಡು ಕೊಂಡು ಪರಿಪೂರ್ಣ ದಾರಿಯಲ್ಲಿ ಸಾಗಬೇಕು, ಇದಕ್ಕೆ ಶಿಕ್ಷಕರ,ಪೋಷಕರ ಸಹಕಾರ ಮುಖ್ಯ ಎಂದರು.
ಮುಖ್ಯ ಅತಿಥಿಗಳಾಗಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ ಎಂ ಬಾಲಚಂದ್ರ ಗೌಡ ಅವರು ಮಾತನಾಡಿ ವಿದ್ಯಾರ್ಥಿಗಳು ಸಂಸ್ಕಾರಯುತವಾಗಿ ವರ್ತಿಸಬೇಕು, ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಯಾಗಬೇಕು ಎಂದರು.
ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ದಾಮೋದರ ಪಿ, ಸಾವಿತ್ರಿ ಕೆ ಉಪಸ್ಥಿತ ರಿದ್ದರು. ವಿದ್ಯಾರ್ಥಿನಿಯರಾದ ಕೃತಿ ಜಿ ರಾವ್ ಮತ್ತು ನಿಶ್ವಿತಾ ಪ್ರಾರ್ಥಿಸಿದರು. ವಿ.ಕ್ಷೇಮಾಧಿಕಾರಿ ಸಾವಿತ್ರಿ ಕೆ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿನಿಯರಾದ ನಿಶ್ವಿತಾ ಮತ್ತು ಬಳಗದವರು ಆಶಯ ಗೀತೆ ಹಾಡಿದರು.ವಿದ್ಯಾರ್ಥಿ ಕ್ಷೇಮಾಧಿಕಾರಿ ದಾಮೋದರ ಪಿ ವಂದಿಸಿದರು. ಕನ್ನಡ ಉಪನ್ಯಾಸಕಿ ಕು.ಬೇಬಿ ವಿದ್ಯಾ ಪಿ.ಬಿ. ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಪ್ರಾoಶುಪಾಲರು ಕಾಲೇಜಿನ ನೀತಿ -ನಿಯಮಗಳು,ಕಾಲೇಜಿನಲ್ಲಿ ಆಯೋಜಿಸಲಾಗುವ ಕಾರ್ಯಕ್ರಮಗಳ ಮಾಹಿತಿಯನ್ನು ನೀಡಿದರು.
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…