ಚುನಾವಣಾ ಕಣ | ಸುಳ್ಯದಲ್ಲಿ ಮೊದಲ ಬಾರಿಗೆ ಇಬ್ಬರು ಮಹಿಳಾ ಅಭ್ಯರ್ಥಿಗಳು | ಜಿದ್ದಿನ ನಡುವಿನ “ನೋಟಾ” | ಬಿಜೆಪಿ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಇನ್ನೊಂದು ಚರ್ಚೆ… ! |

April 11, 2023
11:06 PM

ಕರ್ನಾಟಕ ವಿಧಾನಸಭಾ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಇದೀಗ ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗಿದೆ. ಸುಳ್ಯ ಕ್ಷೇತ್ರಕ್ಕೆ ಭಾಗೀರಥಿ ಮುರುಳ್ಯ ಹೆಸರು ಘೋಷಣೆಯಾಗಿದೆ. ಇದೀಗ ಬಿಜೆಪಿಯಲ್ಲೂ ಚರ್ಚೆ ಆರಂಭವಾಗಿದೆ. ಈಗ ಬಿಜೆಪಿ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಚರ್ಚೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ನಡುವೆಯೇ ಎಸ್‌ ಅಂಗಾರ ಅವರಿಗೆ ಟಿಕೆಟ್ ತಪ್ಪಿರುವ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ , ಜಿಲ್ಲಾ ಉಪಾಧ್ಯಕ್ಷ  ವೆಂಕಟ್‌ ವಳಲಂಬೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಭಾಗೀರಥಿ ಮುರುಳ್ಯ

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಎಸ್‌ ಅಂಗಾರ ಅವರು ಬಿಜೆಪಿ ಅಭ್ಯರ್ಥಿಯಾಗಿ ಗೆಲವು ಕಂಡಿದ್ದಾರೆ. ಈ ಬಾರಿ ಅಭ್ಯರ್ಥಿ ಬದಲಾವಣೆಯನ್ನು ಬಿಜೆಪಿ ಹೈಕಮಾಂಡ್‌ ಮಾಡಿದೆ. ಸುಳ್ಯದಲ್ಲಿ ಅಭಿವೃದ್ಧಿ ಪರವಾದ ಕೂಗು ಇತ್ತು, ವಿರೋಧಿ ಅಲೆ ಈಗಲೂ ಇದೆ. ಈ ವಿರೋಧಿ ತಪ್ಪಿಸಲು ಬಿಜೆಪಿ ಅಭ್ಯರ್ಥಿ ಬದಲಾವಣೆ ಮಾಡಿತ್ತು. ಆದರೆ ಬಿಜೆಪಿ ಒಳಗಿನ ಆಂತರಿಕ ಭಿನ್ನಾಭಿಪ್ರಾಯಗಳೂ ಇಲ್ಲಿ ಕೆಲಸ ಮಾಡುತ್ತಿರುವ ಕಾರಣದಿಂದ ಅಭ್ಯರ್ಥಿ ಬದಲಾವಣೆಯ ತಮ್ಮ ಬಣಗಳಿಗೆ ಲಭ್ಯವಾಗಿಲ್ಲ ಎಂದು ಮತ್ತೆ ಭಿನ್ನಾಭಿಪ್ರಾಯ ಇಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಚರ್ಚೆ ಆರಂಭವಾಗಿದ್ದು ನೋಟ ಅಥವಾ ಬೇರೆ ಪಕ್ಷದ ಚರ್ಚೆ ಆರಂಭವಾಗಿದೆ.

ಜಿ ಕೃಷ್ಣಪ್ಪ

ಈಗಾಗಲೇ ಕಾಂಗ್ರೆಸ್ ಪಕ್ಷವು ಟಿಕೆಟ್‌ ಘೋಷಣೆ ಮಾಡಿದ್ದರೂ ಅಲ್ಲೂ ಭಿನ್ನಾಭಿಪ್ರಾಯ ಕಂಡುಬಂದಿದೆ. ಎರಡು ಬಣಗಳ ಕಾರಣದಿಂದ ಕಾಂಗ್ರೆಸ್‌ ಕೂಡಾ ಸರ್ಕಸ್‌ ಮಾಡುತ್ತಿದೆ. ಘೋಷಿತ ಅಭ್ಯರ್ಥಿ ಕೃಷ್ಣಪ್ಪ ಈಗಾಗಲೇ ಮತದಾರರ ಭೇಟಿಗೆ ಇಳಿದಿದ್ದಾರೆ. ಟಿಕೆಟ್‌ ಆಕಾಂಕ್ಷಿ ನಂದಕುಮಾರ್‌ ಅವರ ಅಭಿಮಾನಿಗಳು ಸಾಕಷ್ಟು ಮಂದಿ ಇದ್ದು, ಈಚೆಗೆ ನಡೆದ ಸಮಾವೇಶದಲ್ಲೂ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ಬಾರಿಯ ಚುನಾವಣೆಯಲ್ಲಿ ಸುಳ್ಯದಲ್ಲಿ ಮತದಾರರು ಬದಲಾವಣೆ ಬಯಸಿದ್ದರೂ ಕಾಂಗ್ರೆಸ್‌ ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲವಾಗುತ್ತಿದೆ. ಇದಕ್ಕೆ ಕಾಂಗ್ರೆಸ್‌ ಪಕ್ಷವೇ ಕಾರಣವಾಗಿದೆ.

ನಂದಕುಮಾರ್

ಈ ಎಲ್ಲದರ ನಡುವೆ ಬೆಳೆಯುತ್ತಿರುವ ಪಕ್ಷ ಆಮ್‌ ಆದ್ಮಿ. ಸುಶಿಕ್ಷಿತ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ಎಂಬಿಎ ಪದವೀಧರೆಯನ್ನು ಎಲ್ಲರಿಗಿಂತಲೂ ಮೊದಲೇ ಅಭ್ಯರ್ಥಿ ಎಂದು ಘೋಷಿಸಿ ಕಣಕ್ಕೆ ಇಳಿಸಿದೆ. ಈಗಾಗಲೇ ಮತದಾರರ ಭೇಟಿಯನ್ನು ಆರಂಭಿಸಿದ್ದಾರೆ. ಜಾತಿ, ಧರ್ಮದ ಸಂಗತಿಗಳನ್ನು ದೂರ ಇರಿಸಿ ಕ್ಷೇತ್ರದ ಅಭಿವೃದ್ಧಿ ವಿಚಾರವನ್ನೇ ಮುಂದಿರಿಸಿ ಮತಯಾಚನೆ ಮಾಡುತ್ತಿದ್ದಾರೆ. ಹೀಗಾಗಿ ಸುಳ್ಯದಲ್ಲಿ ಇಬ್ಬರು ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ‌

ಸುಮನಾ ಬೆಳ್ಳಾರ್ಕರ್

ಇದೀಗ ಎರಡೂ ಪಕ್ಷಗಳ ಅಭ್ಯರ್ಥಿಗಳ ಘೋಷಣೆ ಬಳಿಕ ಅಸಮಾಧಾನಗಳು ಹೆಚ್ಚಾಗಿವೆ. ಈ ಅಸಮಾಧಾನಗಳು ನೋಟ ಮತವಾಗಿಯೂ ಎಎಪಿ ಪರವಾಗಿಯೂ ಚರ್ಚೆಯಾಗುತ್ತಿವೆ. ನೋಟಾ ಕಾರಣದಿಂದ ಯಾವ ಪ್ರಯೋಜನವೂ ಇಲ್ಲದ ಕಾರಣದಿಂದ ಅಭಿವೃದ್ಧಿ ಪರವಾಗಿರುವ ಯೋಜನೆ ಹಾಕಿಕೊಂಡಿರುವ ಎಎಪಿ ಪರವಾಗಿ ಒಂದಷ್ಟು ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾಗಿದೆ. ಸುಳ್ಯವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತೇವೆ ಎಂದು ಎಎಪಿ ಮತ್ತೆ ಮತ್ತೆ ಹೇಳುತ್ತಿದೆ. ಮತದಾರನ ಒಲವು ಏನು ಎನ್ನುವುದು  ಸುಳ್ಯದಲ್ಲಿ ಈ ಬಾರಿ ಕುತೂಹಲ.‌

ಹೀಗಾಗಿ ಇಬ್ಬರು ಮಹಿಳಾ ಅಭ್ಯರ್ಥಿಗಳು ಸುಳ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಪರ್ಧೆ ಮಾಡುತ್ತಿದ್ದಾರೆ. ಅವರ ಜೊತೆ ಪುರುಷ ಅಭ್ಯರ್ಥಿಗಳೂ ಕಣದಲ್ಲಿದ್ದಾರೆ. ಯಾರಾಗ್ತಾರೆ ಸುಳ್ಯದ ಶಾಸಕ..?

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |
March 16, 2025
11:20 AM
by: ಸಾಯಿಶೇಖರ್ ಕರಿಕಳ
ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ
March 16, 2025
7:53 AM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ
March 16, 2025
7:36 AM
by: The Rural Mirror ಸುದ್ದಿಜಾಲ
ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
March 16, 2025
7:29 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror