ಸುಳ್ಯ ವಿಧಾನಸಭಾ ಕ್ಷೇತ್ರದ ಹಲವು ರಸ್ತೆಗಳ ಅಭಿವೃದ್ಧಿಗೆ ಚಾಲನೆ ದೊರೆತಿದೆ. ಒಟ್ಟು 172 ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ. ಆ.16 ರಂದು ಟೆಂಡರ್ ಪ್ರಕ್ರಿಯೆಗೆ ಚಾಲನೆ ದೊರೆತು ಬಹುಪಾಲು ರಸ್ತೆ ಅಭಿವೃದ್ಧಿಗೆ ಆ.26 ರಿಂದ ಆನ್ ಲೈನ್ ಮೂಲಕ ಟೆಂಡರ್ ಆಹ್ವಾನಕ್ಕೆ ಚಾಲನೆ ದೊರೆತಿದೆ.ಸೆ.19 ರ ಒಳಗಾಗಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಸಚಿವ ಎಸ್ ಅಂಗಾರ ಅವರ ವಿಶೇಷ ಮುತುವರ್ಜಿಯಿಂದ ಈ ಬಾರಿ ರಸ್ತೆಗಳಿಗೆ ಅನುದಾನ ಲಭ್ಯವಾಗಿದ್ದು, ಗ್ರಾಮೀಣ ಭಾಗದ ಅಭಿವೃದ್ಧಿಯ ಕಡೆಗೆ ಸಚಿವ ಅಂಗಾರ ಅವರು ಗಮನಹರಿಸಿದ್ದು ಮುಂದಿನ ದಿನಗಳಲ್ಲಿ ಪ್ರಮುಖ ರಸ್ತೆಗಳು ಹಾಗೂ ಸೇತುವೆಗಳ ಅಭಿವೃದ್ಧಿಗೂ ಆದ್ಯತೆ ನೀಡಲಿದ್ದಾರೆ.
ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗದ ಮೂಲಕ ನಡೆಯುವ 172 ಕಾಮಗಾರಿಗಳಲ್ಲಿ ರಸ್ತೆ ಅಭಿವೃದ್ಧಿ ಸೇರಿದೆ. ಕನಿಷ್ಟ 25 ಲಕ್ಷ ರೂಪಾಯಿಯಿಂದ 2 ಕೋಟಿಯವರೆಗಿನ ರಸ್ತೆ ಕಾಮಗಾರಿಗಳು ನಡೆಯುತ್ತದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಹಾಗೂ ಕಡಬ ತಾಲೂಕು ಬಹುತೇಕ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ಲಭ್ಯವಾಗಿದೆ. ಸುಳ್ಯ ಹಾಗೂ ಕಡಬ ತಾಲೂಕಿನ ಹಲವು ರಸ್ತೆ ಅಭಿವೃದ್ಧಿ ಬೇಡಿಕೆಗಳು ಇರುವ ರಸ್ತೆಗಳು ಈ ಬಾರಿ ಅಭಿವೃದ್ಧಿಯ ನಿರೀಕ್ಷೆ ಹೊಂದಿವೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…