Advertisement
ಸುದ್ದಿಗಳು

ಸುಳ್ಯದ ರಸ್ತೆಗಳ ಅಭಿವೃದ್ಧಿಗೆ ಚಾಲನೆ | 172 ಕಾಮಗಾರಿಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಚಾಲನೆ | ಸಚಿವ ಎಸ್‌ ಅಂಗಾರ ಅವರ ವಿಶೇಷ ಮುತುವರ್ಜಿ |

Share

ಸುಳ್ಯ ವಿಧಾನಸಭಾ ಕ್ಷೇತ್ರದ ಹಲವು ರಸ್ತೆಗಳ ಅಭಿವೃದ್ಧಿಗೆ ಚಾಲನೆ ದೊರೆತಿದೆ. ಒಟ್ಟು 172 ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗೆ ಟೆಂಡರ್‌ ಪ್ರಕ್ರಿಯೆ ಹಂತದಲ್ಲಿದೆ. ಆ.16 ರಂದು ಟೆಂಡರ್ ಪ್ರಕ್ರಿಯೆಗೆ ಚಾಲನೆ ದೊರೆತು ಬಹುಪಾಲು ರಸ್ತೆ ಅಭಿವೃದ್ಧಿಗೆ ಆ.26 ರಿಂದ ಆನ್‌ ಲೈನ್‌ ಮೂಲಕ ಟೆಂಡರ್‌ ಆಹ್ವಾನಕ್ಕೆ ಚಾಲನೆ ದೊರೆತಿದೆ.ಸೆ.19 ರ ಒಳಗಾಗಿ ಟೆಂಡರ್‌ ಪ್ರಕ್ರಿಯೆ ನಡೆಯಲಿದೆ. ಸಚಿವ ಎಸ್‌ ಅಂಗಾರ ಅವರ ವಿಶೇಷ ಮುತುವರ್ಜಿಯಿಂದ ಈ ಬಾರಿ ರಸ್ತೆಗಳಿಗೆ ಅನುದಾನ ಲಭ್ಯವಾಗಿದ್ದು, ಗ್ರಾಮೀಣ ಭಾಗದ ಅಭಿವೃದ್ಧಿಯ ಕಡೆಗೆ ಸಚಿವ ಅಂಗಾರ ಅವರು ಗಮನಹರಿಸಿದ್ದು ಮುಂದಿನ ದಿನಗಳಲ್ಲಿ ಪ್ರಮುಖ ರಸ್ತೆಗಳು ಹಾಗೂ ಸೇತುವೆಗಳ ಅಭಿವೃದ್ಧಿಗೂ ಆದ್ಯತೆ ನೀಡಲಿದ್ದಾರೆ.

ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ವಿಭಾಗದ ಮೂಲಕ ನಡೆಯುವ 172 ಕಾಮಗಾರಿಗಳಲ್ಲಿ ರಸ್ತೆ ಅಭಿವೃದ್ಧಿ ಸೇರಿದೆ. ಕನಿಷ್ಟ 25 ಲಕ್ಷ ರೂಪಾಯಿಯಿಂದ 2 ಕೋಟಿಯವರೆಗಿನ ರಸ್ತೆ ಕಾಮಗಾರಿಗಳು ನಡೆಯುತ್ತದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಹಾಗೂ ಕಡಬ ತಾಲೂಕು ಬಹುತೇಕ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ಲಭ್ಯವಾಗಿದೆ. ಸುಳ್ಯ ಹಾಗೂ ಕಡಬ ತಾಲೂಕಿನ ಹಲವು ರಸ್ತೆ ಅಭಿವೃದ್ಧಿ ಬೇಡಿಕೆಗಳು ಇರುವ ರಸ್ತೆಗಳು ಈ ಬಾರಿ ಅಭಿವೃದ್ಧಿಯ ನಿರೀಕ್ಷೆ ಹೊಂದಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

32 minutes ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

1 hour ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 hour ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago