ಸುಳ್ಯ ತಾಲೂಕು 26 ನೇ ಕನ್ನಡ ಸಾಹಿತ್ಯ ಸಮ್ಮೇಳನ | ಅರಂತೋಡಿನಲ್ಲಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ |

November 20, 2022
2:08 PM

ಸುಳ್ಯ ತಾಲೂಕು 26 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಅರಂತೋಡು ನೆಹರೂ ಸ್ಮಾರಕ ಪ.ಪೂ ಕಾಲೇಜಿನಲ್ಲಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಭಾನುವಾರ ಉದ್ಘಾಟನೆಗೊಂಡಿತು.

ಕಾರ್ಯಕ್ರಮ ವನ್ನು ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹದೇವ ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕನ್ನಡ, ನಾಡು- ನುಡಿ ಉಳಿಸುವ ಕೆಲಸ ಸಾಹಿತ್ಯಿಕ ಚಟುವಟಿಕೆಗಳ ಮೂಲಕ ಆಗಬೇಕಿದೆ ಎಂದರು.

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹಾಗೂ ಕಾಲೇಜಿನ ಸಂಚಾಲಕ ಕೆ.ಆರ್.ಗಂಗಾಧರ ಮಾತನಾಡಿ, ಇಂತಹ ಸ್ಪರ್ಧಾತ್ಮಕ ಚಟುವಟಿಕೆಗಳ ಮೂಲಕ ಮಕ್ಕಳು ಗೆದ್ದರೂ, ಸೋತರು ಅದನ್ನು ಸವಾಲಾಗಿ ಸ್ವೀಕರಿಸಿ ಬದುಕಿನ ಪಾಠವನ್ನು ಕಲಿಯಬೇಕಿದೆ ಎಂದರು.

ಅಧ್ಯಕ್ಷತೆಯನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದರು.

ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಉಮ್ಮರ್ ಬೀಜದಕಟ್ಟೆ, ಕಾಲೇಜಿನ ಪ್ರಿನ್ಸಿಪಾಲ್ ರಮೇಶ, ಪ್ರೌಢ ಶಾಲಾ ಮುಖ್ಯಶಿಕ್ಷಕ ಸೀತಾರಾಮ ಎಂ.ಕೆ, ಕನ್ನಡ ಸಾಹಿತ್ಯ ಪರಿಷತ್ ಗೌರ ಕಾರ್ಯದರ್ಶಿ ತೇಜಸ್ವಿ ಕಡಪಳ, ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಜಿ.ಕೆ.ಹಮೀದ್, ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕಿ ಚಂದ್ರಮತಿ ಉಪಸ್ಥಿತರಿದ್ದರು.

ಸ್ಪರ್ಧಾಸಮಿತಿ ಸಂಚಾಲಕ ಹನುಮಂತಪ್ಪ .ಜಿ ಸ್ವಾಗತಿಸಿ, ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕ ಕೇಶವ ಸಿ.ಎ ಪ್ರಾಸ್ತಾವಿಕ ಮಾತನಾಡಿದರು. ಕಮಲಾಕ್ಷ ಕಾರ್ಯಕ್ರಮ ನಿರೂಪಿಸಿದರು. ಬಳಿಕ ನಾನಾ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror