ಸುಳ್ಯ ತಾಲೂಕು 26 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಅರಂತೋಡು ನೆಹರೂ ಸ್ಮಾರಕ ಪ.ಪೂ ಕಾಲೇಜಿನಲ್ಲಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಭಾನುವಾರ ಉದ್ಘಾಟನೆಗೊಂಡಿತು.
ಕಾರ್ಯಕ್ರಮ ವನ್ನು ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹದೇವ ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕನ್ನಡ, ನಾಡು- ನುಡಿ ಉಳಿಸುವ ಕೆಲಸ ಸಾಹಿತ್ಯಿಕ ಚಟುವಟಿಕೆಗಳ ಮೂಲಕ ಆಗಬೇಕಿದೆ ಎಂದರು. ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹಾಗೂ ಕಾಲೇಜಿನ ಸಂಚಾಲಕ ಕೆ.ಆರ್.ಗಂಗಾಧರ ಮಾತನಾಡಿ, ಇಂತಹ ಸ್ಪರ್ಧಾತ್ಮಕ ಚಟುವಟಿಕೆಗಳ ಮೂಲಕ ಮಕ್ಕಳು ಗೆದ್ದರೂ, ಸೋತರು ಅದನ್ನು ಸವಾಲಾಗಿ ಸ್ವೀಕರಿಸಿ ಬದುಕಿನ ಪಾಠವನ್ನು ಕಲಿಯಬೇಕಿದೆ ಎಂದರು. ಅಧ್ಯಕ್ಷತೆಯನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಉಮ್ಮರ್ ಬೀಜದಕಟ್ಟೆ, ಕಾಲೇಜಿನ ಪ್ರಿನ್ಸಿಪಾಲ್ ರಮೇಶ, ಪ್ರೌಢ ಶಾಲಾ ಮುಖ್ಯಶಿಕ್ಷಕ ಸೀತಾರಾಮ ಎಂ.ಕೆ, ಕನ್ನಡ ಸಾಹಿತ್ಯ ಪರಿಷತ್ ಗೌರ ಕಾರ್ಯದರ್ಶಿ ತೇಜಸ್ವಿ ಕಡಪಳ, ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಜಿ.ಕೆ.ಹಮೀದ್, ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕಿ ಚಂದ್ರಮತಿ ಉಪಸ್ಥಿತರಿದ್ದರು.ಸ್ಪರ್ಧಾಸಮಿತಿ ಸಂಚಾಲಕ ಹನುಮಂತಪ್ಪ .ಜಿ ಸ್ವಾಗತಿಸಿ, ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕ ಕೇಶವ ಸಿ.ಎ ಪ್ರಾಸ್ತಾವಿಕ ಮಾತನಾಡಿದರು. ಕಮಲಾಕ್ಷ ಕಾರ್ಯಕ್ರಮ ನಿರೂಪಿಸಿದರು. ಬಳಿಕ ನಾನಾ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…