ಸುಳ್ಯದ ಶಾಂತಿನಗರ ಎಂಬಲ್ಲಿ ವ್ಯಕ್ತಿಯೊಬ್ಬರು ಕಾರಿನಲ್ಲಿ ಬೆಳಗ್ಗೆ ಹೋಗುತ್ತಿದ್ದಾಗ ಅಪರಿಚಿತರು ಗುಂಡಿನ ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ. ಗುಂಡು ತಾಗಿರುವ ವ್ಯಕ್ತಿ ಸಂಪತ್ ಕುಮಾರ್ (35) ಎಂದು ತಿಳಿದುಬಂದಿದ್ದು ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿಲಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಬೆಳಗ್ಗೆ 6 ಗಂಟೆ ಸುಮಾರಿಗೆ ಸಂಪತ್ ಅವರು ಮನೆಯಿಂದ ಹೊರಡುವ ವೇಳೆ ಅಪರಿಚಿತರು ಕಾರಿನ ಮೇಲೆ ದಾಳಿ ನಡೆಸಿದ್ದರು ಈ ಸಂದರ್ಭ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದಿದೆ. ನಂತರವೂ ಗುಂಡಿನ ಸದ್ದು ಕೇಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪೊಲೀಸ್ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.
ಸಂಪತ್ ಎಂಬವರು ಕೊಡಗು ಸಂಪಾಜೆಯ ಪ್ರಭಾವಿ ನಾಯಕ ಬಾಲಚಂದ್ರ ಕಳಗಿ ಅವರ ಕೊಲೆ ಪ್ರಕರಣದ ಆರೋಪಿ ಎಂದು ತಿಳಿದುಬಂದಿದೆ.
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಈಚೆಗೆ…
ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ…