ಸುಳ್ಯದ ಕಸದ ಸಮಸ್ಯೆ ಅನೇಕ ವರ್ಷಗಳಿಂದ ಇದೆ. ಇದುವರೆಗೂ ತ್ಯಾಜ್ಯ ವಿಲೇವಾರಿಯೇ ತಲೆನೋವಾಗಿತ್ತು. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ , ಸಂಸದರ ಮಾಜಿ ಆಪ್ತ ಕಾರ್ಯದರ್ಶಿ ಸುಪ್ರೀತ್ ಮೋಂಟಡ್ಕ ಅವರು ಚಿತ್ರನಟ ಅನಿರುದ್ಧ ಅವರಿಗೆ ವಿಡಿಯೋ ಕಳಿಸಿದ್ದರು. ಸುಳ್ಯದ ಕಸದ ವಿಡಿಯೋ ಹಾಗೂ ಫೋಟೊ ನೋಡಿದ ಚಿತ್ರನಟ ಅನಿರುದ್ಧ ಅವರು “ಸುಳ್ಯದ ಕಸದ ಸಮಸ್ಯೆಗೆ ಮುಕ್ತಿ ನೀಡಿ” ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ಆದರೆ ಇದೀಗ ಆ ವಿಡಿಯೋ ಕಳಿಸಿದ ವ್ಯಕ್ತಿಯ ಬಗ್ಗೆ ಪಕ್ಷದ ಪ್ರಮುಖರು ಮುನಿಸಿಕೊಂಡಿದ್ದಾರೆ ಎಂಬುದು ಚರ್ಚೆಯಾಗುತ್ತಿದೆ. ಕಸದ ವಿಲೇವಾರಿ ಬಗ್ಗೆ, ಸಾರ್ವಜನಿಕರು ಕೈಗೊಳ್ಳಬೇಕಾದ ಕ್ರಮಗಳು ಬಗ್ಗೆ , ಇದುವರೆಗೂ ತ್ಯಾಜ್ಯ ವಿಲೇವಾರಿಗೆ ಕ್ರಮವಾಗದ ಬಗ್ಗೆ ಯಾವುದೇ ಪ್ರತಿಕ್ರಿಯೆಗಳು ಕಾಣಲಿಲ್ಲ, ಬದಲಾಗಿ ಅನಿರುದ್ಧ ಅವರಿಗೆ ಮಾಹಿತಿ ನೀಡಿದ ಸುಪ್ರೀತ್ ಬಗ್ಗೆ ಅಸಮಾಧಾನಗಳನ್ನು ಪಕ್ಷದ ಪ್ರಮುಖರು ವ್ಯಕ್ತಪಡಿಸಿದರೆ ಸಾರ್ವಜನಿಕ ವಲಯದಲ್ಲಿ ಅನಿರುದ್ಧ ಅವರ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…