ಜೆಡಿಎಸ್ ಮಂಡ್ಯ ಜಿಲ್ಲೆಯ ಜನತೆಯ ದಳ. ಇಂತಹ ಜೆಡಿಎಸ್ ಅನ್ನು ಧೂಳೀಪಟ ಮಾಡುತ್ತೇನೆ ಎಂದು ಕೆಲವರು ದುರಹಂಕಾರದಲ್ಲಿ ಹೇಳುತ್ತಾ ಇದ್ದಾರೆ ಎನ್ನುವ ಮೂಲಕ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಅವರ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಭಾಷಣ ಮಾಡುವ ವೇಳೆ ಸುಮಲತಾ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜನರಿಗಾಗಿ ಇರುವುದು ಜೆಡಿಎಸ್ ಪಕ್ಷ. ಇಂತಹ ಪಕ್ಷವನ್ನು ಯಾರು ಧೂಳೀಪಟ ಮಾಡುತ್ತೇನೆ ಎಂದು ಹೇಳಿದ್ದಾರೆ ಎಂದು ಜನರಿಗೆ ಗೊತ್ತು ಎಂದು ಕಿಡಿಕಾರಿದರು.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅನ್ನು ಮುಗಿಸಿದ್ದೇನೆ ಎಂದು ಹೇಳುತ್ತಾರೆ. ಇದಕ್ಕೆ ಉತ್ತರ ಮಂಡ್ಯ ಜಿಲ್ಲೆಯ ಜನರಿಂದ ನಾನು ಬಯಸುತ್ತಾ ಇದ್ದೇನೆ. ನನ್ನ ಕೈಯಲ್ಲಿ ಶಕ್ತಿ ಇಲ್ಲ, ನಮ್ಮದು ಸಣ್ಣ ಪಕ್ಷ. ರೈತರ ಈ ಪಕ್ಷವನ್ನು ಮುಗಿಸುತ್ತೇವೆ ಎಂದು ಸವಾಲು ಸ್ವೀಕಾರ ಮಾಡಿದ್ದಾರೆ. ನನಗೆ ಆಶ್ಚರ್ಯವಾಗಿದೆ ಕುಮಾರಣ್ಣ ಮಂಡ್ಯಗೆ ಬರ್ತಾರೆ ಎನ್ನುವುದು. ಯಾರು ಈ ಸುದ್ದಿಯನ್ನು ಹೊರಡಿಸಿದ್ದಾರೋ ಗೊತ್ತಿಲ್ಲ. ಈ ಸುದ್ದಿಯನ್ನು ಗಂಭೀರವಾಗಿ ತೆಗೆದುಕೊಂಡು, ಬರಲಿ ನಾನೇ ಅವರ ವಿರುದ್ಧ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ಉದ್ಧಟತನದ ಮಾತನ್ನು ಆಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕುಮಾರಣ್ಣ ಮಂಡ್ಯದಲ್ಲಿ ಬಂದು ನಿಲ್ಲಬೇಕಿಲ್ಲ. ಕುಮಾರಣ್ಣ ಮಂಡ್ಯ ಜಿಲ್ಲೆಯ ಜನರ ಮನಸ್ಸಿನಲ್ಲಿ ನೆಲೆಸಿದ್ದಾನೆ. ಮಂಡ್ಯ ಜನರಿಗೆ ದೇವೇಗೌಡರ ಕುಟುಂಬ ಮೋಸ ಮಾಡಿಲ್ಲ. ಜೆಡಿಎಸ್ ವಿರುದ್ಧ ಮಾತನಾಡುತ್ತಿರುವ ವ್ಯಕ್ತಿಯ ಪತಿಗೆ ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾಗ ಗೌರವ ಕೊಟ್ಟಿದ್ದು ಜೆಡಿಎಸ್. ನಾನು ದುರಹಂಕಾರದ ಮಾತು ಆಡಲ್ಲ, ನಾನು ನಿಮ್ಮನ್ನು ನಂಬಿದ್ದೇನೆ. ನಮ್ಮ ಪಕ್ಷದ ಬಗ್ಗೆ ಮಾತನಾಡುವವರು ಸರ್ಟಿಫಿಕೇಟ್ ಕೊಡಲ್ಲ. ಮಂಡ್ಯದ ಜನರು ಸರ್ಟಿಫಿಕೇಟ್ ಕೊಡಬೇಕು. ಈ ಬಾರಿಯೂ ಮತ್ತೆ ಮಂಡ್ಯ ಜಿಲ್ಲೆಯಲ್ಲಿ 7 ಕ್ಷೇತ್ರದಲ್ಲಿ ಗೆಲ್ಲಿಸಬೇಕು ಎಂದು ಹೇಳಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…