ಬೇಸಿಗೆಯು ಕಳೆದ ವರ್ಷಕ್ಕಿಂತ ಕಠಿಣವಾಗಿರಬಹುದು | ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

February 7, 2024
12:10 PM

ವಾಡಿಕೆಯಂತೆ ಈ ಬಾರಿ ಮುಂಗಾರು ಹಾಗೂ ಹಿಂಗಾರು ಎರಡು ಮಳೆ(Rain) ಸುರಿಯದೆ ಕೈಕೊಟ್ಟಿತ್ತು. ಅದರ ಅಂದಾಜಿನ ಮೇಲೆಯೇ ಈ ಬಾರಿಯ ಬೇಸಿಗೆ(Summer) ಭಾರಿ ಇರಲಿದೆ ಅನ್ನೋದನ್ನು ಊಹಿಸಲಾಗಿತ್ತು. ಅದೀಗ ಅನುಭವಕ್ಕೆ ಬರಲು ಆರಂಭವಾಗಿದೆ. ಮುಂದಿನ 1 ವಾರ ಶೇಕಡಾ 33 ಡಿಗ್ರಿ ತಾಪಮಾನ(Temperature) ದಾಖಲಾಗಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಅವರು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement

ಎಲ್‌ನಿನೋ(L-Nino) ಪ್ರಭಾವದಿಂದ ಈ ವರ್ಷ ಸುಡುಬಿಸಿಲು ಹೆಚ್ಚಾಗಿರಲಿದೆ. ವಾಡಿಕೆಗಿಂತ ಹೆಚ್ಚು ಉಷ್ಣಾಂಶ ಇರಲಿದೆ. ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಈ ಕುರಿತು ಮಾಹಿತಿ ನೀಡಿದ್ದು, ಮುಂದಿನ ಕೆಲ ದಿನಗಳ ತನಕ ಅತಿ ಹೆಚ್ಚು ಉಷ್ಣಾಂಶ ದಾಖಲಾಗಲಿದೆ. ಈ ವರ್ಷ ವಾಡಿಕೆಗಿಂತ ಅತಿಹೆಚ್ಚು ತಾಪಮಾನ ದಾಖಲಾಗಲಿದೆ. ಫೆಬ್ರವರಿ 6ರಂದು ಶೇಕಡಾ 33 ಡಿಗ್ರಿ ತಾಪಮಾನ ದಾಖಲಾಗಲಿದೆ. ಮುಂದಿನ 1 ವಾರ ಶೇಕಡಾ 33 ಡಿಗ್ರಿ ತಾಪಮಾನ ಮುಂದುವರೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಫೆಬ್ರವರಿ ತಿಂಗಳ ಮೂರನೇ ವಾರದಿಂದಲೇ ಬೆಂಗಳೂರು ಮತ್ತು ಸುತ್ತಮುತ್ತ ಬಿಸಿಲಿನ ಹೆಚ್ಚಳದ ಪ್ರಭಾವ ಎದುರಿಸಬೇಕಾಗುತ್ತದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

Advertisement

ಫೆಬ್ರವರಿ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಸರಾಸರಿ ಮಳೆ 7 ಮಿಲಿ ಮೀಟರ್ ಮಳೆಯಾಗುತ್ತದೆ. ಈ ವರ್ಷ ಮಾತ್ರ ಸರಾಸರಿಗಿಂತ ಕಡಿಮೆ ಮಳೆ ದಾಖಲಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಪೂರ್ವ ಪೆಸಿಫಿಕ್ ಸಾಗರದಲ್ಲಿ ಮೇಲ್ಮೈ ನೀರಿನ ತಾಪಮಾನ ಏರಿಕೆಗೆ ಕಾರಣವಾಗುವ ಹವಾಮಾನ ಪರಿಸ್ಥಿತಿಯಾದ ಎಲ್ನಿನೋ ಪರಿಣಾಮವು ಪ್ರಬಲವಾಗಿದೆ. ಪ್ರತಿ ವರ್ಷ ಜಾಗತಿಕ ತಾಪಮಾನ ಏರಿಕೆಯಿಂದಾಗಿ ಸೆಖೆ ಹೆಚ್ಚಾಗುತ್ತಿದೆ ಎಂದು ಐಎಂಡಿ ಬೆಂಗಳೂರಿನ ವಿಜ್ಞಾನಿ ಎ ಪ್ರಸಾದ್ ಹೇಳಿದ್ದಾರೆ.

ತಾಂತ್ರಿಕವಾಗಿ ಫೆಬ್ರವರಿ ಚಳಿಗಾಲದ ತಿಂಗಳಾಗಿದ್ದರೂ, ಎಲ್ ನಿನೋ ಪರಿಣಾಮವು ತಾಪಮಾನವನ್ನು ಹೆಚ್ಚಿಸುತ್ತಿದೆ. ಮಾರ್ಚ್ ನಂತರ ಬಿಸಿಲು ಕಡಿಮೆಯಾಗಬಹುದು. ಆದರೆ ಪ್ರಸ್ತುತ ಪರಿಸ್ಥಿತಿಗಳು ಬೇಸಿಗೆಯ ವಿಸ್ತರಣೆಯನ್ನು ಸೂಚಿಸುತ್ತಿದ್ದು, ಬೇಸಿಗೆಯು ಕಳೆದ ವರ್ಷಕ್ಕಿಂತ ಕಠಿಣವಾಗಿರಬಹುದು ಎಂದು ಎ ಪ್ರಸಾದ್ ಹೇಳಿದ್ದಾರೆ.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ
ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |
November 21, 2024
7:25 PM
by: ದ ರೂರಲ್ ಮಿರರ್.ಕಾಂ
ಹುಣಸೆ ಹಣ್ಣು ಸಂರಕ್ಷಣೆ, ಮಾರಾಟದ ತರಬೇತಿ ಕಾರ್ಯಾಗಾರ
November 21, 2024
7:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror